ಮಂಗಳೂರು : ಕೇರಳ- ಕರ್ನಾಟಕ ನಡುವೆ ಅಂತರ್ ರಾಜ್ಯ ಸರ್ಕಾರಿ ಬಸ್‌ಗಳ ಸಂಚಾರವನ್ನು ಪುನರಾರಂಭಗೊಳಿಸಲು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅನುಮತಿಸಿ ನ.17ರ ಬುಧವಾರ ಆದೇಶ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ ಕೊವೀಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ ಕ.ರಾ.ರ.ಸಾ.ನಿ.ದ ಬಸ್ ಗಳು ಮಂಗಳೂರು ಮತ್ತು ಪುತ್ತೂರು ವಿಭಾಗದ ಡಿಪ್ಪೊಗಳಿಂದ ಅಂತರ್ ರಾಜ್ಯ ಬಸ್ ಓಡಾಟಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಪ್ರಸ್ತುತ ರಾಜ್ಯ ಸರಕಾರವು ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ-ವಹಿವಾಟು ಸೇರಿದಂತೆ ಇತರ ಕಾರಣಗಳಿಗೆ ಭಾರೀ ಸಂಖ್ಯೆಯಲ್ಲಿ ದಿನನಿತ್ಯ ಸಾವಿರಾರು ಮಂದಿಗೆ ಅನುಕೂಲವಾಗುವಂತೆ ಮಂಗಳೂರು – ಕಾಸರಗೋಡು ನೇರ ಸಂಚಾರಕ್ಕೆ ಭೇಡಿಕೆ ಬಂದಿರುವ ಹಿನ್ನಲೆಯಲ್ಲಿ ಪ್ರಯಾಣಿಕರು ಕೊವೀಡ್ ಮಾರ್ಗಸೂಚಿ ಪಾಲಿಸುವಂತೆ ಷರತ್ತುಬದ್ಧ ಅನುಮತಿ ನೀಡಿದ್ದಾರೆ.
ಕೇರಳ ಮತ್ತು ಕರ್ನಾಟಕದ ಸರ್ಕಾರಿ (ಕೆಎಸ್ಸಾರ್ಟಿಸಿ)ಗಳಿಗೆ ಮಾತ್ರ ಜಿಲ್ಲಾಧಿಕಾರಿಗಳು ಸಂಚರಿಸಿಲು ಅನುಮತಿಸಿದ್ದು, ಪ್ರಯಾಣಿಸುವವರು ಕೋವಿಡ್ ಮಾರ್ಗಸೂಚಿಯನ್ನು (ಮುಖಗವಸು, ಸ್ಯಾನಿಟೈಸರ್, ಸುರಕ್ಷಿತ ಅಂತರ) ಕಡ್ಡಾಯವಾಗಿ ಪಾಲಿಸಬೇಕು.
ಮಾತ್ರವಲ್ಲದೆ ಬಸ್ ಮೂಲಕ ಸಂಚರಿಸುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿರುವ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ವರದಿಯನ್ನು ಆಯಾ ಬಸ್‌ನ ನಿರ್ವಾಹಕರು (ಕಂಡೆಕ್ಟರ್) ಖಚಿತಪಡಿಸ ಕೊಳ್ಳಬೇಕು. ಕೋವಿಡ್ ಲಸಿಕೆ ೨ ಡೋಸ್ ಪಡೆದಿರಬೇಕು ಹಾಗೂ ದಿನಂಪ್ರತಿ ಓಡಾಟದ ಪ್ರಯಾಣಿಕರು 7 ದಿನಕ್ಕೊಮ್ಮೆಯಂತೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ವರದಿಯನ್ನು ಬಸ್‌ನ ನಿರ್ವಾಹಕರು ಖಚಿತಪಡಿಸಕೊಳ್ಳಬೇಕು.
ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…