Featured

ಮಂಗಳೂರು: ಕೇರಳ- ಕರ್ನಾಟಕ ನಡುವೆ ಅಂತರ್ ರಾಜ್ಯ ಸರ್ಕಾರಿ ಬಸ್‌ ಸಂಚಾರ ಪುನರಾರಂಭ :  ಡಿ.ಸಿ ಅನುಮತಿ – Vishwanews24

ಮಂಗಳೂರು: ಕೇರಳ- ಕರ್ನಾಟಕ ನಡುವೆ ಅಂತರ್ ರಾಜ್ಯ ಸರ್ಕಾರಿ ಬಸ್‌ ಸಂಚಾರ ಪುನರಾರಂಭ :  ಡಿ.ಸಿ ಅನುಮತಿ – Vishwanews24

ಮಂಗಳೂರು : ಕೇರಳ- ಕರ್ನಾಟಕ ನಡುವೆ ಅಂತರ್ ರಾಜ್ಯ ಸರ್ಕಾರಿ ಬಸ್‌ಗಳ ಸಂಚಾರವನ್ನು ಪುನರಾರಂಭಗೊಳಿಸಲು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅನುಮತಿಸಿ ನ.17ರ ಬುಧವಾರ ಆದೇಶ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ ಕೊವೀಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ ಕ.ರಾ.ರ.ಸಾ.ನಿ.ದ ಬಸ್ ಗಳು ಮಂಗಳೂರು ಮತ್ತು ಪುತ್ತೂರು ವಿಭಾಗದ ಡಿಪ್ಪೊಗಳಿಂದ ಅಂತರ್ ರಾಜ್ಯ ಬಸ್ ಓಡಾಟಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಪ್ರಸ್ತುತ ರಾಜ್ಯ ಸರಕಾರವು ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ-ವಹಿವಾಟು ಸೇರಿದಂತೆ ಇತರ ಕಾರಣಗಳಿಗೆ ಭಾರೀ ಸಂಖ್ಯೆಯಲ್ಲಿ ದಿನನಿತ್ಯ ಸಾವಿರಾರು ಮಂದಿಗೆ ಅನುಕೂಲವಾಗುವಂತೆ ಮಂಗಳೂರು – ಕಾಸರಗೋಡು ನೇರ ಸಂಚಾರಕ್ಕೆ ಭೇಡಿಕೆ ಬಂದಿರುವ ಹಿನ್ನಲೆಯಲ್ಲಿ ಪ್ರಯಾಣಿಕರು ಕೊವೀಡ್ ಮಾರ್ಗಸೂಚಿ ಪಾಲಿಸುವಂತೆ ಷರತ್ತುಬದ್ಧ ಅನುಮತಿ ನೀಡಿದ್ದಾರೆ.

ಕೇರಳ ಮತ್ತು ಕರ್ನಾಟಕದ ಸರ್ಕಾರಿ (ಕೆಎಸ್ಸಾರ್ಟಿಸಿ)ಗಳಿಗೆ ಮಾತ್ರ ಜಿಲ್ಲಾಧಿಕಾರಿಗಳು ಸಂಚರಿಸಿಲು ಅನುಮತಿಸಿದ್ದು, ಪ್ರಯಾಣಿಸುವವರು ಕೋವಿಡ್ ಮಾರ್ಗಸೂಚಿಯನ್ನು (ಮುಖಗವಸು, ಸ್ಯಾನಿಟೈಸರ್, ಸುರಕ್ಷಿತ ಅಂತರ) ಕಡ್ಡಾಯವಾಗಿ ಪಾಲಿಸಬೇಕು.

ಮಾತ್ರವಲ್ಲದೆ ಬಸ್ ಮೂಲಕ ಸಂಚರಿಸುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿರುವ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ವರದಿಯನ್ನು ಆಯಾ ಬಸ್‌ನ ನಿರ್ವಾಹಕರು (ಕಂಡೆಕ್ಟರ್) ಖಚಿತಪಡಿಸ ಕೊಳ್ಳಬೇಕು. ಕೋವಿಡ್ ಲಸಿಕೆ ೨ ಡೋಸ್ ಪಡೆದಿರಬೇಕು ಹಾಗೂ ದಿನಂಪ್ರತಿ ಓಡಾಟದ ಪ್ರಯಾಣಿಕರು 7 ದಿನಕ್ಕೊಮ್ಮೆಯಂತೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ವರದಿಯನ್ನು ಬಸ್‌ನ ನಿರ್ವಾಹಕರು ಖಚಿತಪಡಿಸಕೊಳ್ಳಬೇಕು.

ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ತಿಳಿಸಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

9 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

9 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

10 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

10 hours ago