Featured

ಮಂಗಳೂರು : ಕೇರಳ ಲಾಟರಿ ಹೆಸರಿನಲ್ಲಿ ಸೈಬರ್ ವಂಚನೆ ; 3 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ -vishwanews24

ಮಂಗಳೂರು : ಕೇರಳ ಲಾಟರಿ ಹೆಸರಿನಲ್ಲಿ ಸೈಬರ್ ವಂಚನೆ ; 3 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ

ಮಂಗಳೂರು : ಕೇರಳ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನ ಬಂದಿದೆ. ಅದನ್ನು ಪಡೆದುಕೊಳ್ಳಲು ತೆರಿಗೆ ಹಣ ಕಟ್ಟಬೇಕು ಎಂದು ನಂಬಿಸಿ ಅಪರಿಚಿತರು 3 ಲಕ್ಷದ 81 ಸಾವಿರ ರೂ.ಹಣ ವರ್ಗಾಯಿಸಲು ತಿಳಿಸಿ ವಂಚನೆ ಮಾಡಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

42 ವರ್ಷದ ದೂರುದಾರರಿಗೆ ಆ.14ರಂದು ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ಕೇರಳ ಲಾಟರಿಯಲ್ಲಿ 8 ಲಕ್ಷ ರೂ. ಬಂದಿದೆ ಎಂದು ನಂಬಿಸಿ ಹಣವನ್ನು ಪಡೆಯಲು ತೆರಿಗೆ ಕಟ್ಟಬೇಕು ಎಂದು ತಿಳಿಸಿದ್ದಾನೆ. ಇದನ್ನು ನಂಬಿದ ದೂರುದಾರರು ಅಪರಿಚಿತ ವ್ಯಕ್ತಿ ಕಳುಹಿಸಿದ ಗೂಗಲ್ ಪೇ, ಫೋನ್ ಪೇ ಸ್ಕ್ಯಾನರ್ ಗಳಿಗೆ ಆ.15ರಿಂದ 26ರ ವರೆಗೆ ಹಂತ ಹಂತವಾಗಿ 3,81,300 ರೂ. ವರ್ಗಾಯಿಸಿದ್ದಾರೆ.

ಮತ್ತೆ ಕರೆ ಮಾಡಿದ ಅಪರಿಚಿತ ಲಾಟರಿ ಹಣ ಡಬಲ್ ಆಗಿದ್ದು, ಪುನಃ ಟ್ಯಾಕ್ಸ್ ಕಟ್ಟಬೇಕು ಎಂದು ಒತ್ತಾಯಿಸಿದ್ದಾನೆ. ಆಗ ದೂರುದಾರರಿಗೆ ಅದೊಂದು ಮೋಸದ ಜಾಲ ಎಂದು ಗೊತ್ತಾಗಿ ಸೈಬರ್ ಹೆಲ್ಪ್ ಲೈನ್ ಗೆ ಕರೆ ಮಾಡಿ ದೂರು ದಾಖಲಿಸಿದ್ದಾರೆ.

Vishwa News 24

Recent Posts

ರಾಜ್ಯಾದ್ಯಂತ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆ: ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ -vishwanews24

ರಾಜ್ಯಾದ್ಯಂತ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆ: ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ ಮಂಗಳೂರು: ರಾಜ್ಯದಲ್ಲಿ ಆಹಾರ ಸುರಕ್ಷತೆ ಮತ್ತು…

32 minutes ago

ಉಡುಪಿ : ಯುವತಿ ನಾಪತ್ತೆ  -vishwanews24

ಉಡುಪಿ : ಯುವತಿ ನಾಪತ್ತೆ  ಉಡುಪಿ : ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಈಶ್ವರಿ (18) ಎಂಬ ಯುವತಿ…

40 minutes ago

ಸಾಲ ತೀರಿಸಲು ಹಣ ಕೊಟ್ಟಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ -vishwanews24

ಸಾಲ ತೀರಿಸಲು ಹಣ ಕೊಟ್ಟಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ ಕೋಲಾರ: ಸಾಲ  ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ …

1 hour ago

ತಮಿಳುನಾಡಿನ 52 ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ನಿಷೇಧ -vishwanews24

ತಮಿಳುನಾಡಿನ 52 ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ನಿಷೇಧ ಚೆನ್ನೈ : ತಮಿಳುನಾಡಿನ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ…

1 hour ago

ಉಡುಪಿ : ಈ ಬಾರಿ ಕೃಷ್ಣ ಜನ್ಮಾಷ್ಟಮಿ ಗೆ ‘ಮರ್ಮೆನ್’ ಅವತಾರದಲ್ಲಿ ರವಿ ಕಟಪಾಡಿ -vishwanews24

ಉಡುಪಿ : ಈ ಬಾರಿ ಕೃಷ್ಣ ಜನ್ಮಾಷ್ಟಮಿ ಗೆ ‘ಮರ್ಮೆನ್’ ಅವತಾರದಲ್ಲಿ ರವಿ ಕಟಪಾಡಿ ಉಡುಪಿ: ವಿಭಿನ್ನ ವೇಷ ಧರಿಸಿ…

1 hour ago

ಬೆಳ್ತಂಗಡಿ: ಭ್ರಷ್ಟಾಚಾರ ಪ್ರಕರಣ: ಎಸ್‌ಐಟಿ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು – vishwanews24

ಬೆಳ್ತಂಗಡಿ: ಭ್ರಷ್ಟಾಚಾರ ಪ್ರಕರಣ: ಎಸ್‌ಐಟಿ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ…

1 day ago