ಮಂಗಳೂರು, (Vishwanews24 ) : ಮಂಗಳೂರಿನ ಹೊರವಲಯದ ಮೂಲ್ಕಿಯ ಬಳ್ಕುಂಜೆ ಗ್ರಾಮದ ಕವತ್ತಾರು ಎಂಬಲ್ಲಿ ಸುಮಾರು 19 ವರ್ಷಗಳಿಂದ 65ರ ಹರೆಯದ ಪಿ.ಖಾಸಿಂ ಸಾಹೇಬ್ ಎಂಬವರು ಕೊರಗಜ್ಜ ಹಾಗೂ ಪರಿವಾರ ದೈವಗಳನ್ನು ಸದ್ದಿಲ್ಲದೆ ಪೂಜಿಸಿಕೊಂಡು ಬರುತ್ತಿದ್ದಾರೆ. ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ಖಾಸಿಂ ತಮ್ಮ 30ರ ಹರೆಯದಲ್ಲಿ ಗರಗಸ ಹಿಡಿದು ಮರಗಳನ್ನು ಸೀಳುವ ಕೆಲಸಕ್ಕೆಂದು ಕರ್ನಾಟಕದ ಸುಳ್ಯ, ಬಳ್ಕುಂಜೆ ಬಳಿಕ ಕುಟುಂಬ ಸಹಿತ ಮುಲ್ಕಿಯ ಕವತ್ತಾರಿಗೆ ಬಂದು ನೆಲೆ ನಿಂತರು.
ಪಿ. ಕಾಸಿಂ ಸಾಹೇಬ್ ಅವರು ಶ್ರೀಸ್ವಾಮಿ ಕೊರಗಜ್ಜ, ಕೊರತಿ, ಗುಳಿಗ ದೈವಸ್ಥಾನ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಗಳನ್ನು ನಿರ್ಮಿಸಿದ್ದು ಪ್ರತಿದಿನ ದೀಪ ಸೇವೆ, ಸಂಕ್ರಾಂತಿ ಮತ್ತಿತರ ಸಂದರ್ಭ ವಿಶೇಷ ಪೂಜೆಯನ್ನೂ ಮಾಡುತ್ತಿದ್ದಾರೆ. ತನ್ನ ಜೀವನವನ್ನೇ ದೇವ-ದೈವರ ಪೂಜೆ ಕಾಸಿಂ ಸಾಹೇಬ್ ಮುಡಿಪಾಗಿರಿಸಿದ್ದಾರೆ.
ಮಂಗಳೂರಿನ ಹೊರವಲಯದ ಮೂಲ್ಕಿಯ ಬಳ್ಕುಂಜೆ ಗ್ರಾಮದ ಕವತ್ತಾರು ಎಂಬಲ್ಲಿ ಸುಮಾರು 19 ವರ್ಷಗಳಿಂದ 65ರ ಹರೆಯದ ಪಿ.ಖಾಸಿಂ ಸಾಹೇಬ್ ಎಂಬವರು ಕೊರಗಜ್ಜ ಹಾಗೂ ಪರಿವಾರ ದೈವಗಳನ್ನು ಸದ್ದಿಲ್ಲದೆ ಪೂಜಿಸಿಕೊಂಡು ಬರುತ್ತಿದ್ದಾರೆ. ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ಖಾಸಿಂ ತಮ್ಮ 30ರ ಹರೆಯದಲ್ಲಿ ಗರಗಸ ಹಿಡಿದು ಮರಗಳನ್ನು ಸೀಳುವ ಕೆಲಸಕ್ಕೆಂದು ಕರ್ನಾಟಕದ ಸುಳ್ಯ, ಬಳ್ಕುಂಜೆ ಬಳಿಕ ಕುಟುಂಬ ಸಹಿತ ಮುಲ್ಕಿಯ ಕವತ್ತಾರಿಗೆ ಬಂದು ನೆಲೆ ನಿಂತರು.
35 ವರ್ಷಗಳ ಹಿಂದೆ ಸರಕಾರಿ ಜಾಗದಲ್ಲಿ ಜೋಪಡಿ ಕಟ್ಟಿಕೊಂಡು ಪತ್ನಿ ಹಾಗೂ ಐವರು ಮಕ್ಕಳ ಜೊತೆ ಸಂಸಾರ ಆರಂಭಿಸಿದ್ದರು. ಸ್ವಲ್ಪ ಸಮಯದ ನಂತರ ಇವರ ಕುಟುಂಬದಲ್ಲಿ ಸಮಸ್ಯೆಗಳು ಎದುರಾದವು. ಮಗ ತೀವ್ರ ಅನಾರೋಗ್ಯಕ್ಕೊಳಗಾದ, ಹೆಣ್ಮಕ್ಕಳಿಗೆ ಮದುವೆ ಕೂಡಿ ಬರುತ್ತಿರಲಿಲ್ಲ, ಇವರ ಕಾಲು ಊನವಾಗಿ ನಡೆಯದ ಪರಿಸ್ಥಿತಿ ಬಂತು. ಕೇರಳಕ್ಕೆ ಹೋಗಿ ಸಮಸ್ಯೆ ಹೇಳಿದಾಗ ಜಾಗದಲ್ಲಿ ಸಮಸ್ಯೆ ಇದೆ ಎಂದು ಗೊತ್ತಾಯಿತು.
ಇಲ್ಲಿಗೆ ಬಂದಾಗ ಅದು ಕೊರಗಜ್ಜನ ನೆಲೆ. ಒಂದೋ ಕೊರಗಜ್ಜನನ್ನು ನಂಬಬೇಕು, ಇಲ್ಲವೇ ಜಾಗ ಖಾಲಿ ಮಾಡಬೇಕೆಂದು ದರ್ಶನ ಪಾತ್ರಿ ಹೇಳಿದ್ದರು. ಬೇರೆ ದಾರಿ ಇಲ್ಲದೆ ಕೊರಗಜ್ಜನನ್ನು ನಂಬಲು ಆರಂಭಿಸಿದೆ ಎಂದು ಖಾಸಿಂ ಹೇಳುತ್ತಾರೆ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಸಿಂ ಸಾಹೇಬ್ ಅವರು, ನನ್ನ ಕುಟುಂಬಸ್ಥರು ಈ ದೈವ ಸೇವೆಗೆ ಸಹಕಾರ ನೀಡುತ್ತಿದ್ದಾರೆ. ಯಾರಿಗೂ ನಾನು ದೈವಗಳನ್ನು ನಂಬಲು ಹೇಳುತ್ತಿಲ್ಲ. ನನ್ನ ಪ್ರಕಾರ ದೇವರು ಒಬ್ಬನೇ ಆದರೆ ಇವರೆಲ್ಲರೂ ದೇವರ ದೂತರು ಎಂದು ಹೇಳಿದ್ದಾರೆ.
ಇನ್ನು ಮಕ್ಕಳು, ಮೊಮ್ಮಕ್ಕಳು ಮಸೀದಿ, ಮದ್ರಸಕ್ಕೆ ಹೋಗುತ್ತಾರೆ. ಆದರೆ ಈಗ ನಾನು ಕೊರಗಜ್ಜನನ್ನು ನಂಬಿದ ಬಳಿಕ ಜನರನ್ನು ನೋಡಿ ದರ್ಶನ ಬರುವ ಭಯದಿಂದ ಮಸೀದಿಗೆ ಹೋಗುತ್ತಿಲ್ಲ. ನನ್ನ ಬಳಿಕ ಈ ದೈವಗಳ ಸೇವೆಗೆ ಜನವಿಡಲು ವ್ಯವಸ್ಥೆ ಮಾಡಿಕೊಳ್ಳುತ್ತೇನೆ. ಜಾತಿ ಬಿಟ್ಟರೂ ನಮ್ಮ ದೈವ ಬಿಡಲಾರದು ಎಂದು ಹೇಳಿದ್ದಾರೆ.
ನಾನು ಯಾರಿಂದಲೂ ವಂತಿಗೆ ಹಣವನ್ನು ಪಡೆಯುತ್ತಿಲ್ಲ. ಕಾಣಿಕೆ ಮೊತ್ತದಿಂದ ಗುಡಿ ಜೀರ್ಣೋದ್ಧಾರ ಮಾಡಿದ್ದೇನೆ. ಈ ಹಿಂದೆ ಮರೆಯಲ್ಲಿಯೇ ಇದ್ದ ದೈವಗಳಿಗೆ ಈಗ ಗುಡಿ ಕಟ್ಟಿಸಿ ಪೂಜೆ ಮಾಡುತ್ತಿದ್ದೇನೆ. ಸಮಸ್ಯೆ ಹೇಳಿಕೊಂಡು ಬರುವವರಿಗೆ ಕೊರಗಜ್ಜನ ಮಾರ್ಗದರ್ಶನದಂತೆ ಕರಿಗಂಧ ನೀಡುತ್ತೇನೆ ಎಂದಿದ್ದಾರೆ.
ಪ್ರಸ್ತುತ ಬಪ್ಪನಾಡು ಕ್ಷೇತ್ರದ ಉಳ್ಳಾಲ್ತಿ, ಕೊರತಿ, ಗುಳಿಗ ಹಾಗೂ ಕೊರಗಜ್ಜನನ್ನು ಇಲ್ಲಿ ಆರಾಧಿಸಲಾಗುತ್ತಿದೆ.2-3 ವರ್ಷಗಳಿಗೊಮ್ಮೆ ಅನುಕೂಲಕ್ಕೆ ತಕ್ಕ ಹಾಗೆ ಕೋಲ, ಹರಕೆ ರೂಪದ ಪೂಜೆ ಮಾಡಲಾಗುತ್ತದೆ. ಇಲ್ಲಿಗೆ ಜನರು ಯಾವುದೇ ಧರ್ಮ ಭೇದವಿಲ್ಲದೆ ಬರುತ್ತಾರೆ ಎಂದು ಹೇಳುತ್ತಾರೆ ಕಾಸಿಂ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…