ಮಂಗಳೂರು: ವಿಶ್ವ ಪರ್ಯಟನೆಯ ಪ್ರವಾಸಿ ಹಡಗಿಗೆ ನವಮಂಗಳೂರು ಬಂದರು ಪ್ರವೇಶಿಸಲು ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಿಸಲಾಗಿದೆ.
ಪ್ರವಾಸಿಗರನ್ನು ಹೊತ್ತ ಹಡಗು ಶನಿವಾರ ಮುಂಜಾನೆ 6 ಗಂಟೆಗೆ ಬಂದರು ಪ್ರವೇಶಿಸಬೇಕಿತ್ತು. ಆದರೆ ಹಡಗು ಕೊರೋನಾ ಪೀಡಿತ ದೇಶಗಳ ಪ್ರದೇಶಗಳಿಗೆ ಭೇಟಿ ನೀಡಿ ಬರುತ್ತಿರುವುದರಿಂದ ಸರಕಾರ ಅನುಮತಿ ನಿರಾಕರಿಸಿದೆ.
ಹಡಗಿನಲ್ಲಿರುವ ಪ್ರವಾಸಿಗರಲ್ಲಿ ಕೊರೊನಾ ಸೋಂಕು ಬಾಧಿತರು ಯಾರು ಇಲ್ಲ ಎಂದು ತಪಾಸಣೆಯಿಂದ ದೃಢಪಟ್ಟಿದೆ ಎಂದು ಹಡಗಿನ ನಿರ್ವಹಣೆ ತಂಡ ಸಮಜಾಯಿಷಿ ನೀಡಿದ್ದರೂ ಕೂಡಾ ಸರ್ಕಾರ ಅನುಮತಿ ನೀಡಿಲ್ಲ.
ಹಡಗಿನಲ್ಲಿ ಆಗಮಿಸಲಿದ್ದ ವಿದೇಶಿ ಪ್ರವಾಸಿಗರ ವೈದ್ಯಕೀಯ ತಪಾಸಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಎನ್ಎಂಪಿಟಿ ಆಡಳಿತ ವ್ಯವಸ್ಥೆ ಎಲ್ಲಾ ಸಿದ್ಧತೆ ನಡೆಸಿದ್ದು ಶುಕ್ರವಾರ ರಾತ್ರಿ ಹಡಗಿನ ಪ್ರಯಾಣ ರದ್ದುಕೊಂಡಿರುವ ಕುರಿತು ಅವರಿಗೆ ಮಾಹಿತಿ ಬಂದಿದೆ . ಬಂದರಿನಲ್ಲಿಹಡಗಿನಲ್ಲಿ ಆಗಮಿಸಲಿದ್ದು ಪ್ರವಾಸಿಗರು ಮಂಗಳೂರು ಸುತ್ತಮುತ್ತಲಿನ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲು ಉದ್ದೇಶಿಸಿದ್ದರು.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…