ಮಂಗಳೂರು : ಕೊರೊನಾ ನಿರ್ವಹಣೆಗೆ ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆ ಸರಕಾರಕ್ಕೆ ಬಿಟ್ಟು ಕೊಡಲೇಬೇಕು : ಸಚಿವ ಕೋಟ -Vishwanews24

ಮಂಗಳೂರು,: ಕೊರೊನಾ ನಿರ್ವಹಣೆಗೆ ಖಾಸಗಿ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮರ್ಥ್ಯದ ಶೇ.50ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

 

 

ಅವರು ಗುರುವಾರ ಕೊರೊನಾ ನಿರ್ವಹಣೆ ಸಂಬಂಧ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಮನವಿ ಮೇರೆಗೆ ಎ.ಜೆ ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಸಾರ್ವಜನಿಕ ಆರೋಗ್ಯ ರಕ್ಷಣೆ ಸರಕಾರದ ಆದ್ಯತೆಯಾಗಿದೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು. ರಾಜ್ಯ ಸರಕಾರವು ಆಯುಷ್ಮಾನ್ ಯೋಜನೆಯಡಿ ಕೊರೊನಾ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಉದ್ದೇಶಿಸಿದೆ. ಅಲ್ಲದೆ ಖಾಸಗಿಯಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಸರಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು ಎಂದು ಸಚಿವರು ತಿಳಿಸಿದರು.

ಖಾಸಗಿ ಆಸ್ಪತ್ರೆಗಳಿಗೆ ಸರಕಾರದಿಂದ ರ್‍ಯಾಪಿಡ್ ಕಿಟ್‌‌ಗಳನ್ನು ಸರಬರಾಜು ಮಾಡಲಾಗುತ್ತಿದ್ದು, ಉಚಿತವಾಗಿ ಕೊರೊನಾ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಈ ಪರೀಕ್ಷೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು. ಜಿಲ್ಲೆಗೆ ರಾಜ್ಯ ಸರಕಾರವು 50 ವೆಂಟಿಲೇಟರ್‌‌ಗಳನ್ನು ಸರಬರಾಜು ಮಾಡಲಿದೆ ಎಂದರು.

ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮಾತನಾಡಿ, ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆ ವಿವರ, ಶುಲ್ಕ ಮಾಹಿತಿ, ಆಯುಷ್ಮಾ‌ನ್ ಯೋಜನೆಯ ಸಮರ್ಪಕ ಮಾಹಿತಿಯನ್ನು ರೋಗಿಗಳು ದಾಖಲಾಗುವಾಗಲೇ ನೀಡಬೇಕು. ಆಸ್ಪತ್ರೆಯ ಪ್ರವೇಶ ದ್ವಾರದಲ್ಲಿ ದೊಡ್ಡ ಬೋರ್ಡ್ ಹಾಕಿ ವಿವರ ನಮೂದಿಸಬೇಕು ಎಂದು ಸೂಚಿಸಿದರು.

ಎಲ್ಲಾ ಮೆಡಿಕಲ್ ಕಾಲೇಜುಗಳು ಪ್ರತೀ ದಿ‌ನ 100 ಮಂದಿಯ ‌ರ್‍ಯಾಪಿಡ್ ಆಂಟಿಜನ್ ಪರೀಕ್ಷೆಯನ್ನು ಉಚಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಾರ್ವಜನಿಕರಿಗೆ ಆಯುಷ್ಮಾ‌ನ್ ಸೌಲಭ್ಯದ ಮಾಹಿತಿ ನೀಡಲು ಆರೋಗ್ಯ ಇಲಾಖೆ ವತಿಯಿಂದ ಪ್ರತೀ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರ ಕಾರ್ಯಕರ್ತರನ್ನು ನೇಮಿಸಲಾಗಿದ್ದು, ಇವರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ತೋರುವವರ ವಿರುದ್ಧ ಕ್ರಮ‌ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದರು.

ಸಭೆಯಲ್ಲಿ ಶಾಸಕ ಡಾ. ಭರತ್ ಶೆಟ್ಟಿ, ಜಿ.ಪಂ.ಸಿಇಒ ಡಾ. ಸೆಲ್ವಮಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯಾರಿ, ವೆನ್ಲಾಕ್‌‌ ಅಧೀಕ್ಷಕ ಡಾ.ಸದಾಶಿವ, ಎ.ಜೆ. ಆಸ್ಪತ್ರೆ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ, ಶ್ರೀನಿವಾಸ ಮೆಡಿಕಲ್ ಕಾಲೇಜಿನ ಡೀನ್ ಡಾ. ಉದಯಕುಮಾರ್ ಮತ್ತಿತರರು ಇದ್ದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

10 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

10 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

10 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

11 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

11 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

11 hours ago