Featured

ಮಂಗಳೂರು:  ಕೊರೊನಾ ಭೀತಿ : ಮುನ್ನೆಚ್ಚರಿಕಾ ಕ್ರಮದ ಮಾರ್ಗಸೂಚಿ ಪ್ರಕಟಿಸಿದ ಜಿಲ್ಲಾಧಿಕಾರಿ.. Vishwanews24

ಮಂಗಳೂರು:  ಕೊರೊನಾ ಭೀತಿ : ಮುನ್ನೆಚ್ಚರಿಕಾ ಕ್ರಮದ ಮಾರ್ಗಸೂಚಿ ಪ್ರಕಟಿಸಿದ ಜಿಲ್ಲಾಧಿಕಾರಿ..

ಮಂಗಳೂರು: ಚೀನಾ, ಅಮೆರಿಕಾ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನುಸಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೆಲವೊಂದು ಶಿಷ್ಟಾಚಾರ ಕ್ರಮಗಳನ್ನು ಪಾಲಿಸಲು ಜಿಲ್ಲಾಧಿಕಾರಿಯವರು ಸಲಹೆ ಮಾಡಿದ್ದಾರೆ. ಹೊರಾಂಗಣ ಮತ್ತು ಒಳಾಂಗಣದಲ್ಲಿ ಜನಜಂಗುಳಿಯಿರುವೆಡೆಗಳಲ್ಲಿ ಮಾಸ್ಕ್‌ ಧರಿಸುವುದು ಅಗತ್ಯ ಎಂದು ಸೂಚಿಸಿದ್ದಾರೆ.

ಮುಂಬರುವ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಜನ ಎಚ್ಚರಿಕೆ ವಹಿಸುವುದು ಅವಶ್ಯವಾಗಿರುತ್ತದೆ. ಅಲ್ಲದೆ ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್, ಶಾಪಿಂಗ್ ಮಾಲ್, ಕಚೇರಿಗಳು, ಬಸ್, ರೈಲು, ಮೆಟ್ರೋ, ವಿಮಾನಯಾನದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ. ವಿಶೇಷವಾಗಿ ವೃದ್ದರು, ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸಬೇಕು. ಅರ್ಹರೆಲ್ಲರೂ ಕೋವಿಡ್-19 ಲಸಿಕೆಯ ಪ್ರಿಕಾಶನರಿ ಡೋಸ್‌ನ್ನು ಶೀಘ್ರ ತೆಗೆದುಕೊಳ್ಳಬೇಕು. ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣ ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಫಲಿತಾಶದ ಆಧಾರದ ಮೇಲೆ ಚಾಲ್ತಿಯಲ್ಲಿರುವ ಪ್ರಮಾಣೀಕೃತ ಶಿಷ್ಟಾಚಾರದನ್ವಯ ಕ್ರಮಗಳನ್ನು ಪಾಲಿಸಬೇಕು. ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ಪ್ರಾಣಾಯಾಮ, ವ್ಯಾಯಾಮ, ಉಸಿರಾಟದ ವ್ಯಾಯಾಮ, ಧ್ಯಾನ ಮಾಡಬಹುದು.

ಇನ್ನು ಸಭೆ ಸಮಾರಂಭಗಳ ಆಯೋಜಕರು ಕೆಲವೊಂದು ಅಗತ್ಯ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟು ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ-ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು. ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರ ಪಾಲನೆ ಅತೀ ಅಗತ್ಯ. ಕೈಗಾರಿಕಾ ಸಂಸ್ಥೆಗಳಲ್ಲಿ, ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬಂದಿ ಕಡ್ಡಾಯವಾಗಿ ದೈಹಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ಮಾಸ್ಕ್ ಧರಿಸಬೇಕು. ಹೆಚ್ಚಿನ ಜನರ ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣದಲ್ಲಿ ಕಟ್ಟುನಿಟ್ಟಾಗಿ ತಡೆಗಟ್ಟಬೇಕು. ಅಲ್ಲದೆ ಮುಂದಿನ ದಿನಗಳಲ್ಲಿ ಸರ್ಕಾರ ಹೊರಡಿಸುವ ಎಲ್ಲಾ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

10 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago