Featured

ಮಂಗಳೂರು : ಕೊರೊನಾ ಮಾರ್ಗಸೂಚಿ ಮತ್ತು ಅದೇಶಗಳಿಗೆ ಕೆಲವೊಂದು ಸೇರ್ಪಡೆ ಮತ್ತು ಮಾರ್ಪಾಡು : ಸರಕಾರ  ಆದೇಶ -Vishwanews24

ಮಂಗಳೂರು : ಕೊರೊನಾ ಮಾರ್ಗಸೂಚಿ ಮತ್ತು ಅದೇಶಗಳಿಗೆ ಕೆಲವೊಂದು ಸೇರ್ಪಡೆ ಮತ್ತು ಮಾರ್ಪಾಡು : ಸರಕಾರ  ಆದೇಶ -Vishwanews24

ಮಂಗಳೂರು: ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಕೋವಿಡ್-19 ಪ್ರಕರಣಗಳ ಸಂಭಾವ್ಯ ಏರಿಕೆಯನ್ನು ತಡೆಯಲು ಈವರೆಗೆ ಹೊರಡಿಸಿರುವ ಮಾರ್ಗಸೂಚಿ ಮತ್ತು ಅದೇಶಗಳಿಗೆ ಕೆಲವೊಂದು ಸೇರ್ಪಡೆಗಳು ಮತ್ತು ಮಾರ್ಪಾಡುಗಳನ್ನು ಮಾಡಿ ಸರಕಾರ ಆದೇಶಿಸಿರುತ್ತದೆ.

ಈ ಆದೇಶಗಳು ಹಾಗೂ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್-19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 141 (1) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈವರೆಗೆ ಹೊರಡಿಸಿರುವ ನಿರ್ಬಂಧ / ಮಾರ್ಗಸೂಚಿ ಮತ್ತು ಆದೇಶಗಳಿಗೆ ಕೆಲವೊಂದು ಸೇರ್ಪಡೆಗಳು ಮತ್ತು ಮಾರ್ಪಾಡುಗಳನ್ನು ಮಾಡಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆವಿ. ಅವರು ಆದೇಶ ಹೊರಡಿಸಿರುತ್ತಾರೆ.

ಪ್ರಸ್ತುತ ಚಾಲ್ತಿಯಲ್ಲಿರುವ ರಾತ್ರಿ ಕಫ್ರ್ಯೂ ಮುಂದುವರೆಯಲಿದ್ದು, ಸೆಪ್ಟೆಂಬರ್ 25 ರಿಂದ ಅನ್ವಯಿಸುವಂತೆ ರಾತ್ರಿ ಕರ್ಪ್ಯೂ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಶೇ.50ರಷ್ಟು ಸಾಮರ್ಥ್ಯದೊಂದಿಗೆ ಚಿತ್ರಮಂದಿರಕ್ಕೆ ಅನುಮತಿ

ಅಕ್ಟೋಬರ್ 1ರಿಂದ ಕಡ್ಡಾಯವಾಗಿ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವ ಷರತ್ತಿಗೊಳಪಟ್ಟು ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಚಿತ್ರಮಂದಿರ, ಮಲ್ಟಿಪ್ಲೆಕ್ಸ್, ಥಿಯೇಟರ್, ರಂಗಮಂದಿರ ಹಾಗೂ ಆಡಿಟೋರಿಯಂಗಳು ಮತ್ತು ಇದೇ ರೀತಿಯ ಸ್ಥಳಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ಇದನ್ನೂ ಓದಿ : ಪಂಚಮಸಾಲಿಗಳಿಗೆ ಮೀಸಲಾತಿ ಕೊಟ್ಟರೆ ಮಠದಲ್ಲಿ ಮುಖ್ಯಮಂತ್ರಿ ಭಾವಚಿತ್ರ ಹಾಕಿ ಖಾಯಂ ಗೌರವ ಕೊಡುತ್ತೇವೆ : ಬಸವ ಜಯ ಮೃತ್ಯುಂಜಯ ಶ್ರೀ -Vishwanews24

ಲಸಿಕೆ ಪಡೆದವರಿಗೆ ಅವಕಾಶ:
ಎರಡೂ ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಇಂತಹ ಸ್ಥಳದಲ್ಲಿ ಸೇರಲು ಅವಕಾಶ ಇರುತ್ತದೆ. ಮಾತ್ರವಲ್ಲದೆ ಗರ್ಭಿಣಿ ಸ್ತ್ರೀಯರು ಮತ್ತು ಹಿರಿಯ ನಾಗರೀಕರು ಭೇಟಿ ನೀಡದಂತೆ ಸಲಹೆ ನೀಡಲಾಗಿದೆ.

ಇಲ್ಲಿನ ಪ್ರವೇಶ ದ್ವಾರದಲ್ಲಿ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು ಹಾಗೂ ಪ್ರತಿ ಪ್ರದರ್ಶನದ ನಂತರ ಮೇಲೆ ತಿಳಿಸಿದ ಸ್ಥಳಗಳ ವಿಶ್ರಾಂತ ಕೊಠಡಿಗಳು, ಶೌಚಾಲಯ ಸೇರಿದಂತೆ ಎಲ್ಲಾ ಸ್ಥಳಗಳನ್ನು ಸ್ವಚ್ಛಗೊಳಿಸುವುದು, ಪ್ರವೇಶ ಮತ್ತು ನಿರ್ಗಮನ ಅಲ್ಲದೇ ಆಯಕಟ್ಟಿನ ಸ್ಥಳಗಳಲ್ಲಿ ಹ್ಯಾಂಡ್ ಸ್ಯಾನಿಟೈಜರನ್ನು ಸಂಬಂಧಪಟ್ಟ ಅಡಳಿತ ವರ್ಗ, ಮಾಲೀಕರು ಅಥವಾ ಸಂಘಟಕರು ಒದಗಿಸಬೇಕು

ಅ.3ರಿಂದ ಕಡ್ಡಾಯವಾಗಿ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವ ಪರತ್ತಿಗೊಳಪಟ್ಟು ಪಬ್‍ಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳ ಕಾರ್ಯಚರಣೆ ಬಗ್ಗೆ ಈಗಾಗಲೇ ಹೊರಡಿಸಲಾದ ಆದೇಶ ಮುಂದುವರೆಯುವುದು.

ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶವಿರುವ ಗಡಿಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್‍ಪೋಸ್ಟ್ ಗಳಲ್ಲಿ ತಪಾಸಣೆ ಕಾರ್ಯವನ್ನು ಮುಂದುವರೆಸಬೇಕು.

ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51 ರಿಂದ 60 ರನ್ವಯ, ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಕಲಂ 4, 5 ಮತ್ತು 10 ರಂತೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago