ಮಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರದ ತನಕ ಕಾಸರಗೋಡಿಗೆ ಮಂಗಳೂರಿನಿಂದ ಬಸ್ ಸಂಚಾರ ಆರಂಭಿಸದಿರಲು ದ.ಕ.ಜಿಲ್ಲಾ ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇರಳಕ್ಕೆ ಬಸ್ ಸಂಚಾರ ಆರಂಭಿಸಿದಲ್ಲಿ ಪ್ರಯಾಣಿಕರ ಮೇಲೆ ನಿಗಾ ಇರಿಸಿ, ಸೋಂಕು ನಿಯಂತ್ರಣ ಮಾಡುವುದು ಕಷ್ಟವಾಗುತ್ತದೆ. ಆದ್ದರಿಂದ ಮುಂದಿನ ಒಂದು ವಾರದ ಸೋಂಕು ಪ್ರಕರಣಗಳನ್ನು ಪರಿಗಣನೆಗೆ ತೆಗೆದುಕೊಂಡು ಕಾಸರಗೋಡಿನ ಪಾಸಿಟಿವಿಟಿ ರೇಟ್ ಇಳಿಕೆಯಾದಲ್ಲಿ ಬಸ್ ಸಂಚಾರ ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ದುಬಾರಿ ಶುಲ್ಕ ವಿಧಿಸಿದಲ್ಲಿ ನಾಗರಿಕರು ದೂರ ನೀಡಬಹುದು. ಈ ಬಗ್ಗೆ ಪರಿಶೀಲನೆ ನಡೆಸಿ ಹೆಚ್ಚುವರಿ ಮೊತ್ತವನ್ನು ಕೊಡಿಸಲಾಗುತ್ತದೆ. ಕೊರೊನಾ ಸೋಂಕಿತರ ಚಿಕಿತ್ಸಾ ವೆಚ್ಚದ ಬಿಲ್ ಪರಿಶೀಲನೆಗೆ ಜಿಲ್ಲಾ ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಇದುವರೆಗೆ 17 ಖಾಸಗಿ ಆಸ್ಪತ್ರೆಗಳ 2,802 ಪ್ರಕರಣಗಳ ಬಿಲ್ ಪರಿಶೀಲನೆ ನಡೆಸಲಾಗಿದೆ. ಈ ಪೈಕಿ 66 ಪ್ರಕರಣಗಳಲ್ಲಿ ಸರಕಾರ ನಿಗದಿ ಪಡಿಸಿರುವ ಶುಲ್ಕ ಕ್ಕಿಂತ ಹೆಚ್ಚಿನ ಶುಲ್ಕ ವಿಧಿಸಿರುವುದು ಕಂಡು ಬಂದಿದೆ ಎಂದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…