ಮಂಗಳೂರು: ಕೊರೋನಾ ಪಾಸಿಟಿವ್ ಆದವರಿಗೆ ಎಲ್ಲೂ ಚಿಕಿತ್ಸೆಯನ್ನು ಉಚಿತವಾಗಿ ನೀಡುತ್ತಿಲ್ಲ. ಹೀಗಾಗಿ ಕೋವಿಡ್ ಚಿಕಿತ್ಸೆಗಾಗಿ ಹಣ ಪಾವತಿಸಿದ ಎಲ್ಲರ ಹಣವನ್ನು ರಾಜ್ಯ ಸರ್ಕಾರ ಮರು ಪಾವತಿಸಬೇಕು ಎಂದು ಮಾಜಿ ಆರೋಗ್ಯ ಸಚಿವ, ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕೊರೋನಾ ಪಾಸಿಟಿವ್ ಆದವರಿಗೆ ಎಲ್ಲೂ ಉಚಿತ ಚಿಕಿತ್ಸೆ ಸಿಗುತ್ತಿಲ್ಲ. ಅವರೆಲ್ಲರ ಹಣವನ್ನು ಮರು ಪಾವತಿಸಲು ಸಿಎಂ ಪರಿಹಾರ ನಿಧಿಯಿಂದ ತಕ್ಷಣ ಹಣ ಬಿಡುಗಡೆ ಮಾಡಬೇಕು. ಆಗ ಆಸ್ಪತ್ರೆಗಳು ಎಷ್ಟು ಬಿಲ್ ಮಾಡಿದೆ ಅನ್ನೋದು ಸರ್ಕಾರಕ್ಕೆ ಗೊತ್ತಾಗುತ್ತದೆ ಎಂದರು.
ಸರ್ಕಾರ ಈ ಬಗ್ಗೆ ತಕ್ಷಣ ಕಾರ್ಯ ಪ್ರವೃತವಾಗಬೇಕೆಂದು ಅವರು ಒತ್ತಾಯಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೊರೊನಾ ಪಾಸಿಟಿವ್ ಹಾಗೂ ಕೊರೊನಾದಿಂದ ಸಾವನ್ನಪ್ಪುವ ಸಂಖ್ಯೆ ಹೆಚ್ಚಾಗುತ್ತಿದೆ. ಆದರೂ ಎಲ್ಲೆಡೆ ಲಾಕ್ಡೌನ್ ಸಡಿಲಿಸಿದ್ದಾರೆ. ಇತ್ತೀಚೆಗೆ ಕೊರೊನಾ ಟೆಸ್ಟಿಂಗ್ ಕೂಡ ಕಡಿಮೆ ಮಾಡಿದ್ದಾರೆ ಎಂದು ಕಿಡಿಕಾರಿದರು.
ಬೀದಿ ವ್ಯಾಪಾರಿಗಳು, ಇತರೆ ಎಲ್ಲಾ ರೀತಿಯ ವ್ಯಾಪಾರಿಗಳು, ಲಾರಿ, ಬಸ್ ಚಾಲಕರಿಗೆ ಕೊರೊನಾ ರಿಪೋರ್ಟ್ ತರಲು ಆದೇಶಿಸಿ. ಆಗ ಎಲ್ಲರೂ ತಪಾಸಣೆ ಮಾಡುತ್ತಾರೆ ಎಂದು ಅವರು ಅಭಿಪ್ರಾಯಪಟ್ಟರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…