Featured

ಮಂಗಳೂರು : ಕೋವಿಡ್ ನೆಗೆಟಿವ್ ವರದಿ ಇಲ್ಲದೆ ಗಡಿ ಪ್ರವೇಶವಿಲ್ಲ : ಎಡಿಜಿಪಿ ಪ್ರತಾಪ್ ರೆಡ್ಡಿ ಸೂಚನೆ

ಕೇರಳದಲ್ಲಿ ಕೊರೋನ ಪ್ರಕರಣ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆ..

ಮಂಗಳೂರು : ಕೋವಿಡ್ ನೆಗೆಟಿವ್ ವರದಿ ಇಲ್ಲದೆ ಗಡಿ ಪ್ರವೇಶವಿಲ್ಲ : ಎಡಿಜಿಪಿ ಪ್ರತಾಪ್ ರೆಡ್ಡಿ ಸೂಚನೆ

ಮಂಗಳೂರು : ಕೇರಳದಲ್ಲಿ ಕೊರೋನ ಪ್ರಕರಣ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಮಂಗಳೂರು- ಕಾಸರಗೋಡು ಗಡಿ ಭಾಗ ತಲಪಾಡಿಯಲ್ಲಿ ಕಟ್ಟು ನಿಟ್ಟಿನ ಕೈಗೊಳ್ಳುವಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಸೂಚನೆ ನೀಡಿದ್ದಾರೆ.

ತಲಪಾಡಿಗೆ ಇಂದು ಭೇಟಿ ನೀಡಿದ ಅವರು, ರಾಜ್ಯ ಸರಕಾರದ ಸೂಚನೆಯಂತೆ ಕೋವಿಡ್ ನೆಗೆಟಿವ್ ವರದಿ ಇಲ್ಲದೆ ರಾಜ್ಯದೊಳಗೆ ಪ್ರವೇಶ ನೀಡದಂತೆ ಕ್ರಮ ವಹಿಸುವಂತೆ ಅವರು ಈ ಸಂದರ್ಭ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೇವಲ ತುರ್ತು ಭೇಟಿ ಹಾಗೂ ಕೇರಳ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಹಾಲ್ ಟಿಕೆಟ್ ತೋರಿಸಿದರೆ ಅವಕಾಶ ನೀಡಲಾಗುತ್ತದೆ. ಕಾಸರಗೋಡು ಭಾಗದಲ್ಲಿ ಕೊರೋನ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಬಿಗಿ ಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಕೇರಳದಿಂದ ರೈಲು ಮಾರ್ಗವಾಗಿ ಬರುವರಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಮಂಗಳೂರಿನ ಪುರಭವನದಲ್ಲಿ ಪರೀಕ್ಷಾ ಕೇಂದ್ರ ತೆರೆದಿರುವುದಾಗಿ ಪ್ರತಾಪ್ ರೆಡ್ಡಿ ಹೇಳಿದರು.

ಕಾಸರಗೋಡು ಡಿಸಿ, ಎಸ್ಪಿ ಜತೆ ಜಿಲ್ಲೆಯ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಹಾಗಾಗಿ ಉಭಯ ಜಿಲ್ಲೆಗಳ ನಡುವೆ ಯಾವುದೇ ಗೊಂದಲವಿಲ್ಲ ಎಂದು ಅವರು ಹೇಳಿದರು. ಗಡಿಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಸೇರಿದಂತೆ ತಪಾಸಣೆ ಬಗ್ಗೆ ಅವರು ಈ ಸಂದರ್ಭ ಮಾಹಿತಿಯನ್ನು ಪಡೆದರು.

ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ ಈ ಸಂದರ್ಭ ಉಪಸ್ಥಿತರಿದ್ದು ಮಾಹಿತಿ ನೀಡಿದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

2 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

3 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

4 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

4 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

4 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

4 hours ago