Featured

ಮಂಗಳೂರು: ಕೋವಿಡ್ ಮಾರ್ಗಸೂಚಿ ಪಾಲಿಸಿ ದಸರಾ ಆಚರಿಸಿ : ಸಚಿವ ಅಂಗಾರ -Vishwanews24

ಮಂಗಳೂರು: ಕೋವಿಡ್ ಮಾರ್ಗಸೂಚಿ ಪಾಲಿಸಿ ದಸರಾ ಆಚರಿಸಿ : ಸಚಿವ ಅಂಗಾರ -Vishwanews24

ಮಂಗಳೂರು : ಕೋವಿಡ್ ಸೋಂಕು ಹಿನ್ನಲೆಯಲ್ಲಿ ಮುಂಬರುವ ನವರಾತ್ರಿ (ದಸರಾ) ಉತ್ಸವವನ್ನು ಜಿಲ್ಲೆಯ ಕಟೀಲು ದುರ್ಗಾಪರಮೇಶ್ವರಿ, ಕುದ್ರೋಳಿ ಗೋಕರ್ಣನಾಥೇಶ್ವರ ಹಾಗೂ ಮಂಗಳಾದೇವಿ ಸೇರಿದಂತೆ ಇತರೆ ದೇವಸ್ಥಾನಗಳಲ್ಲಿ ಜಿಲ್ಲಾಡಳಿತ ಕಳೆದ ವರ್ಷ ಹೊರಡಿಸಿದ ಮಾರ್ಗಸೂಚಿಗಳಂತೆಯೇ ಈ ಬಾರಿಯೂ ಆಚರಿಸುವುದು ಸೂಕ್ತ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಅವರು ಹೇಳಿದರು.

ಅವರು ಅ.1ರ ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ನವರಾತ್ರಿ ಉತ್ಸವ ಆಚರಣೆ ಸಂಬಂಧ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಕಳೆದ ಬಾರಿ ನವರಾತ್ರಿ ಉತ್ಸವ (ದಸರಾ) ಆಚರಣೆ ಕುರಿತಂತೆ ಜಿಲ್ಲಾಡಳಿತ ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು. ಅದರಂತೆ ದೇವಸ್ಥಾನಗಳ ಆಡಳಿತ ಮಂಡಳಿಗಳು, ಪ್ರಮುಖವಾಗಿ ಭಕ್ತರು ಸಹಕರಿಸಿದರು. ಈ ಬಾರಿ ಕೋವಿಡ್ 3ನೇ ಅಲೆ ಎದುರಾದಲ್ಲಿ ಮತ್ತೊಮ್ಮೆ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡುವ ಸಂದರ್ಭವನ್ನು ತಳ್ಳಿಹಾಕುವಂತಿಲ್ಲ. ಸಮಸ್ಯೆ ಬಿಗಡಾಯಿಸದಂತೆ ನಮಗೆ ನಾವೇ ತಡೆ ಹಾಕಿಕೊಳ್ಳಬೇಕಿದೆ ಎಂದರು. ದೇವಸ್ಥಾನಗಳಿಗೆ ಬರುವ ಭಕ್ತಾದಿಗಳಿಗೆ ಕೋವಿಡ್ ವ್ಯಾಕ್ಸಿನ್ ಪ್ರಯೋಜನದ ಬಗ್ಗೆ ದೇವಸ್ಥಾನಗಳಲ್ಲಿ ಜಾಗೃತಿ ಮೂಡಿಸಬೇಕು, ದೇವಸ್ಥಾನದ ಆವರಣದಲ್ಲಿಯೇ ಜಿಲ್ಲಾಡಳಿತದ ಸಹಯೋಗದಲ್ಲಿ ಲಸಿಕಾ ಶಿಬಿರವನ್ನು ಏರ್ಪಡಿಸಬೇಕು ಎಂದು ಅವರು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಮಾತನಾಡಿ, ದಸರಾ ಸಂದರ್ಭದಲ್ಲಿ ಕೋವಿಡ್ ಸಮುಚಿತ ವರ್ತನೆಯನ್ನು ಪಾಲಿಸಿಕೊಂಡು ದೇವಸ್ಥಾನದಲ್ಲಿ ದರ್ಶನ ಹಾಗೂ ಸೇವೆಯನ್ನು ನಿರ್ವಹಿಸಬೇಕು. ಮಾಸ್ಕ್ ಧಾರಣೆ ಕಡ್ಡಾಯ ಹಾಗೂ ಸಾಮಾಜಿಕ ಅಂತರ ಪಾಲನೆ ಎಲ್ಲರ ಜವಬ್ದಾರಿಯಾಗಿದೆ. ಕಳೆದ ವರ್ಷ ಹೊರಡಿಸಲಾದ ಮಾರ್ಗಸೂಚಿಗಳಂತೆ ಈ ಬಾರಿಯೂ ಜಿಲ್ಲಾಡಳಿತದಿಂದ ಹೊರಡಿಸಲಾಗುವ ಮಾರ್ಗಸೂಚಿಗಳ ಅನ್ವಯ ದಸರಾ ಆಚರಣೆಗೆ ದೇವಸ್ಥಾನದ ಆಡಳಿತ ಮಂಡಳಿಗಳು ಸಹಕಾರ ನೀಡಬೇಕು ಎಂದರು.

Vishwa News 24

Recent Posts

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

18 minutes ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

30 minutes ago

ಮಂಗಳೂರು: ವಿದೇಶಿ ಉದ್ಯೋಗದ ಆಮಿಷಕ್ಕೆ ವಂಚಕರ ಬಲೆಗೆ ಬೀಳದಂತೆ ಯುವಜನತೆಗೆ ಪೊಲೀಸ್‌ ಆಯುಕ್ತರ ಎಚ್ಚರಿಕೆ – vishwanews24

ಮಂಗಳೂರು: ವಿದೇಶಿ ಉದ್ಯೋಗದ ಆಕಾಂಕ್ಷಿಗಳು ಯಾವುದೇ ಏಜೆನ್ಸಿಯನ್ನು ನಂಬುವ ಮುನ್ನಎಚ್ಚರ : ಸುಧೀರ್ ಕುಮಾರ್ ರೆಡ್ಡಿ ಮನವಿ ಮಂಗಳೂರು: ವಿದೇಶದಲ್ಲಿ…

40 minutes ago

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ IT ಇಲಾಖೆ ಅಧಿಕಾರಿಗಳಿಂದ ದಾಳಿ – vishwanews24

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ, IT ಇಲಾಖೆ ಅಧಿಕಾರಿಗಳಿಂದ ದಾಳಿ ಬೆಂಗಳೂರು: ಅಟ್ಟಿಕಾ…

1 hour ago

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಕೈತಪ್ಪುವ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ – vishwanews24

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಬೇರೆ ಮಹಿಳೆಯ ಪಾಲಾಗಬಹುದೆಂಬ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ …

2 hours ago

ಕುಂದಾಪುರ : ಹುಟ್ಟೂರಿಗೆ ತಲುಪಿದ ಅನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ – vishwanews24

ಕುಂದಾಪುರ: ಶಾರ್ಜಾದಲ್ಲಿ ನಿಗೂಢ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಹುಟ್ಟೂರಿಗೆ ಕುಂದಾಪುರ : ಶಾರ್ಜಾದಲ್ಲಿ ಜುಲೈನಲ್ಲಿ ನಿಗೂಢವಾಗಿ…

2 hours ago