Featured

ಮಂಗಳೂರು: ಕೋವಿಡ್ ರೋಗಿಗಳಿಂದ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗಧಿಪಡಿಸಿರುವ ಚಿಕಿತ್ಸಾ ಶುಲ್ಕ ಮಾತ್ರ ಪಡೆಯಬೇಕು: ಕೋಟಾ ಶ್ರೀನಿವಾಸ ಪೂಜಾರಿ  – Vishwanews 24

ಮಂಗಳೂರು: ಕೋವಿಡ್ ರೋಗಿಗಳಿಂದ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗಧಿಪಡಿಸಿರುವ ಚಿಕಿತ್ಸಾ ಶುಲ್ಕ ಮಾತ್ರ ಪಡೆಯಬೇಕು: ಕೋಟಾ ಶ್ರೀನಿವಾಸ ಪೂಜಾರಿ  – Vishwanews 24

ಮಂಗಳೂರು: ಕೋವಿಡ್ ಸೋಂಕಿತರ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿರುವ ಮೊತ್ತದ ಶುಲ್ಕವನ್ನು ಮಾತ್ರ ಪಡೆಯಬೇಕು. ಒಂದೊಮ್ಮೆ ಹೆಚ್ಚುವರಿ ಶುಲ್ಕವನ್ನು ಪಡೆದಲ್ಲಿ ಅದನ್ನು ಹಿಂದಿರುಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್ ರೋಗಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಬಿಲ್‍ಗೆ ಸಂಬಂಧಿಸಿದ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡುವ ಸಂದರ್ಭದಲ್ಲಿ ಸರ್ಕಾರ ನಿಗಧಿಪಡಿಸಿರುವ ದರಕ್ಕಿಂತ ಹೆಚ್ಚಿನ ಚಿಕಿತ್ಸಾ ಶುಲ್ಕವನ್ನು ಪಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿವೆ. ಸಾರ್ವಜನಿಕರಿಂದ ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ಶುಲ್ಕ ಪಡೆಯದಂತೆ ಖಾಸಗಿ ಆಸ್ಪತ್ರೆಗಳ ಉಸ್ತುವಾರಿ ನೋಡಲ್ ಅಧಿಕಾರಿಗಳು ಜವಬ್ದಾರಿಯಿಂದ ನೋಡಿಕೊಳ್ಳಬೇಕು ಎಂದರು.

ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆ ಪಡೆದು ಗುಣ ಹೊಂದಿ ಡಿಸ್ಚಾರ್ಜ್ ಆಗುವಾಗ ನೀಡುವ ಡಿಸ್ಜಾರ್ಚ್ ಸಮರಿ ಸೇರಿದಂತೆ ಚಿಕಿತ್ಸೆಗೆ ವಿಧಿಸುವ ಶುಲ್ಕಗಳ ವಿವರವನ್ನು ಪರಿಶೀಲಿಸಿ ಅವುಗಳಿಗೆ ತಪ್ಪದೇ ದೃಢೀಕರಣ ಮಾಡಬೇಕು ಎಂದರು.

ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ಹಾಗೂ ಮೂಲ ಸೌಕರ್ಯಗಳನ್ನು ಪೂರೈಸುವ ಸಲುವಾಗಿ ಪ್ರತಿ ಆಸ್ಪತ್ರೆಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿದ್ದು, ಸೋಂಕಿತರಿಗೆ ಯಾವುದೇ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು ಆದರೆ, ಕೆಲವು ಅಧಿಕಾರಿಗಳು ಈ ಬಗ್ಗೆ ಉದಾಸೀನತೆ ತೋರುತ್ತಿರುವುದು ಕಂಡುಬಂದಿದೆ. ಅವರುಗಳಿಗೆ ಕಾರಣ ಕೇಳಿ ನೋಟಿಸ್ ನೀಡಬೇಕು ಎಂದು ತಿಳಿಸಿದರು.

ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಬರುವ ರೋಗಿಗಳಿಂದ ಯಾವುದೇ ರೀತಿಯ ಮುಂಗಡ ಹಣವನ್ನು ಪಡೆಯುವ ಆಗಿಲ್ಲ ಎಂದ ಅವರು, ಖಾಸಗಿ ಆಸ್ಪತ್ರೆಗಳು ಶೇ.50 ರಷ್ಟು ಹಾಸಿಗೆಗಳನ್ನು ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ರೆಫರ್ ಮಾಡುವ ರೋಗಿಗಳ ಚಿಕಿತ್ಸೆಗಾಗಿ ಕಾಯ್ದಿರಿಸುವುದು ಕಡ್ಡಾಯವಾಗಿದ್ದು, ಇದನ್ನು ಉಲ್ಲಂಘಿಸಿದ್ದಲ್ಲಿ ಕೆ.ಪಿ.ಎಂ.ಇ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರ ಕಾರ್ಯಪಡೆ ಸಮಿತಿಯ ವರದಿಯನ್ನು ಆಧರಿಸಿ ಕೋವಿಡ್ ಚಿಕಿತ್ಸೆಯ ಪ್ಯಾಕೇಜ್ ದರವನ್ನು ನಿಗದಿ ಪಡಿಸಿದೆ. ಅದರನ್ವಯ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಿದ ರೋಗಿಗಳಿಂದ ಪಡೆದುಕೊಳ್ಳಬೇಕು ಎಂದ ಅವರು, ಸಿ.ಟಿ ಸ್ಕ್ಯಾನಿಂಗ್‍ಗೆ ಬಿ.ಪಿ.ಎಲ್ ಕಾರ್ಡ್ ಹೊಂದಿದವರಿಂದ 1.500, ಇತರರಿಂದ 2.500 ರೂಗಳನ್ನು ಹಾಗೂ ಎಕ್ಸ್-ರೇ ಗೆ 250 ರೂಗಳ ಶುಲ್ಕ ಪಡೆಯಬಹುದಾಗಿದೆ ಎಂದರು.

ಖಾಸಗಿ ಆಸ್ಪತ್ರೆಗೆ ಸಾರ್ವಜನಿಕ ಆರೋಗ್ಯ ಸಂಸ್ಥೆಯಿಂದ ರೆಫರ್ ಮಾಡಿದ ಆಯುಷ್ಮಾನ್ ಕಾರ್ಡ್ ಹೊಂದಿರುವ ಕೋವಿಡ್ ರೋಗಿಗಳ ಒಂದು ದಿನದ ಚಿಕಿತ್ಸೆಗೆ ಜನರಲ್ ವಾರ್ಡ್‍ಗೆ 5.200, ಹೆಚ್.ಡಿ.ಯು ಗೆ 7.000, ಐ.ಸಿ.ಯು ವೆಂಟಿಲೇಟರ್ ರಹಿತಕ್ಕೆ 8.500, ಐ.ಸಿ.ಯು ವೆಂಟಿಲೇಟರ್ ಸಹಿತ ಚಿಕಿತ್ಸೆಗೆ 10.000 ರೂಗಳನ್ನು ಪಿ.ಪಿ.ಇ ಹಾಗೂ ಇತರ ಉಪಭೋಗ್ಯ ವಸ್ತುಗಳನ್ನೊಳಗೊಂಡಂತೆ ಪಡೆಯಬೇಕು ಎಂದರು.

ಸೋಂಕಿತ ರೋಗಿಗಳು ನೇರವಾಗಿ ಖಾಸಗಿ ಆಸ್ಪತ್ರೆಯಲ್ಲಿ ಪ್ರವೇಶ ಪಡೆದು ಚಿಕಿತ್ಸೆ ಪಡೆದ ರೊಗಿಗಳಿಂದ ಒಂದು ದಿನಕ್ಕೆ ಜನರಲ್ ವಾರ್ಡ್‍ಗೆ 10.000, ಹೆಚ್.ಡಿಯು ಗೆ 12.000, ಐ.ಸಿ.ಯು ವೆಂಟಿಲೇಟರ್ ರಹಿತ 15.000, ಐ.ಸಿ.ಯು ವೆಂಟಿಲೇಟರ್ ಸಹಿತ 25.000 ರೂಗಳನ್ನು ಪಿ.ಪಿ.ಇ ಹಾಗೂ ಇತರ ಉಪಭೋಗ್ಯ ವಸ್ತುಗಳನ್ನೊಳಗೊಂಡಂತೆ ಪಡೆಯಬೇಕು. ಒಂದೇ ಕೋಣೆಯಲ್ಲಿ ಇಬ್ಬರು ರೋಗಿಗಳು ಚಿಕಿತ್ಸೆ ಪಡೆದಲ್ಲಿ ಶೇ.10 ರಷ್ಟು, ಏಕ ವ್ಯಕ್ತಿ ಚಿಕಿತ್ಸೆ ಪಡೆದಲ್ಲಿ ಶೇ.25 ರಷ್ಟು, ಡಿಲಕ್ಸ್ ರೂಮಿನಲ್ಲಿ ಚಿಕಿತ್ಸೆ ಪಡೆದರೆ ಅನಿಯಮಿತ ಶುಲ್ಕ ವೆಚ್ಚವನ್ನು ಪಡೆಯಬಹುದಾಗಿದೆ ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮಾತನಾಡಿ, ಖಾಸಗಿ ಆಸ್ಪತ್ರೆಗಳ ಬಿಲ್‍ಗಳ ಪರಿಶೀಲನೆಗೆ ಜಿಲ್ಲಾಡಳಿತ ಆಡಿಟ್ ತಂಡವನ್ನು ರಚಿಸಲಾಗಿದ್ದು, ತಂಡವು ಖಾಸಗಿ ಆಸ್ಪತೆಗಳ ಬಿಲ್‍ನ ಆಡಿಟ್ ಮಾಡಿ ಜಿಲ್ಲಾಡಳಿತಕ್ಕೆ ವರದಿ ನೀಡಲಿದೆ. ಈ ವರೆಗೆ 11 ಖಾಸಗಿ ಆಸ್ಪತ್ರೆಯ 896 ಕೋವಿಡ್ ರೋಗಿಗಳ ಚಿಕಿತ್ಸಾ ಬಿಲ್‍ಗಳನ್ನು ಪರಿಶೀಲಿಸಿದೆ ಎಂದರು.

ಕೋವಿಡ್ ಸಂಬಂಧ ಖಾಸಗಿ ಆಸ್ಪತ್ರೆಯ ಮೇಲುಸ್ತುವಾರಿಗೆ ನೇಮಕ ಮಾಡಿರುವ ನೋಡಲ್ ಅಧಿಕಾರಿಗಳು ತಮ್ಮ ಹಂತದಲ್ಲಿಯೇ ಹೆಚ್ಚುವರಿ ಶುಲ್ಕವನ್ನು ಪಡೆಯದ ಹಾಗೆ ಜವಬ್ದಾರಿ ವಹಿಸಿ ನೋಡಬೇಕು ಎಂದರು.

ಸಾರ್ವಜನಿಕರು ಕೋವಿಡ್ ಚಿಕಿತ್ಸೆ ಪಡೆದು ಶುಲ್ಕವನ್ನು ಭರಿಸುವಾಗ ಸರ್ಕಾರ ನಿಗಧಿಪಡಿಸಿರುವ ದರವನ್ನು ನೀಡಬೇಕು. ಒಂದೊಮ್ಮೆ ಹೆಚ್ಚುವರಿ ಶುಲ್ಕದ ಬಿಲ್ಲನ್ನು ಖಾಸಗಿ ಆಸ್ಪತ್ರೆಗಳು ನೀಡಿದಾಗ, ಕೂಡಲೇ ಜಿಲ್ಲಾಡಳಿತ ನೇಮಕ ಮಾಡಿರುವ ನೋಡಲ್ ಅಧಿಕಾರಿಗಳ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳನ್ನೊಳಗೊಂಡ ಸಮಿತಿಗೆ ದೂರನ್ನು ನೀಡಬೇಕು ಎಂದರು.

ಖಾಸಗಿ ಆಸ್ಪತ್ರೆಯ ಚಿಕಿತ್ಸೆಗೆ ನೇರವಾಗಿ ಬಂದಂತಹ ಸಂದರ್ಭದಲ್ಲಿ ರೋಗಿಗಳಿಗೆ ಚಿಕಿತ್ಸೆ ಸೇರಿದಂತೆ ವೆಚ್ಚದ ಬಗ್ಗೆ ಸಲಹೆ ಸೂಚನೆಗಳನ್ನು ನೋಡಲ್ ಅಧಿಕಾರಿಗಳು ನೀಡಬೇಕು. ಇದರಿಂದ ಮುಂದಿನ ದಿನಗಳಲ್ಲಿ ಆಗುವ ಶುಲ್ಕ ಭರಿಸುವ ಗೊಂದಲಗಳನ್ನು ನಿವಾರಿಸಲು ಸಾಧ್ಯ ಎಂದರು.

ನೋಡಲ್ ಅಧಿಕಾರಿಗಳು ತಮಗೆ ವಹಿಸಿರುವ ಜವಬ್ದಾರಿಯನ್ನು ಚಾಚುತಪ್ಪದೇ ನಿರ್ವಹಿಸಬೇಕು. ತಮಗೆ ವಹಿಸಿರುವ ಕಾರ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಪ್ರಜ್ಞಾ ಅಮ್ಮೆಂಬಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಹಾಗೂ ಮತ್ತಿತರ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

2 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

2 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

3 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

5 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

5 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago