ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪು ಬಳಿ ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಮೂಲತಃ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಪ್ರಸಕ್ತ ಜೆಪ್ಪು ಮಹಾಕಾಳಿಪಡ್ಪುನಿರ್ಮಲ ನಗರದಲ್ಲಿ ವಾಸವಾಗಿದ್ದ ಕಣ್ಣನ ಗೌಡ ಎಂಬವರ ಪುತ್ರ ವರುಣ್ (15) ಮೃತಪಟ್ಟ ಬಾಲಕ.
ಎ.11ರಂದು ಮಹಾಕಾಳಿಪಡ್ಪಿಅಂಡರ್‌ಪಾಸ್ ಬಳಿಯ ಭಜನಾಮಂದಿರದ ಸಮೀಪ ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ಮಂದಿರದ ಛಾವಣಿ ಬಿದ್ದ ಬಾಲ್ ಹೆಕ್ಕಲು ಹೋದಾಗ ವಿದ್ಯುತ್ ತಂತಿ ತಗುಲಿದ್ದು ಸ್ಥಳದಲ್ಲೇ ಮೃತಪಟ್ಟಿದ್ದ.
ವಾರದ ಹಿಂದೆಷ್ಟೇ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದ ವರುಣ್ ಫಲಿತಾಂಶದ ನಿರೀಕ್ಷೆಯಲ್ಲಿದ್ದ. ತಂದೆ ಕಣ್ಣನ ಗೌಡ ಮಹಾಕಾಳಿಪಡ್ಪುವಿನಲ್ಲಿ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದಾರೆ. ತಂದೆ-ತಾಯಿ, ಅಣ್ಣ ಮತ್ತು ಮೂರುವರೆ ವರ್ಷದ ತಂಗಿಯನ್ನು ವರುಣ್ ಅಗಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…