Featured

ಮಂಗಳೂರು: ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತ ; ಯುವಕ ಸಾವು – vishwanews24

ಮಂಗಳೂರು: ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತ ; ಯುವಕ ಸಾವು

ಮಂಗಳೂರು: ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಯುವಕನೋರ್ವ ಸಾವನ್ನಪ್ಪಿದ ಘಟನೆ ಮೂಡುಪೆರಾರ ಕಾಯರಾಣೆಯಲ್ಲಿ ಸೆಪ್ಟೆಂಬರ್ 1 ರಂದು ನಡೆದಿದೆ.

ಮೂಡುಪೆರಾರ ಕಾಯರಾಣೆ ನಿವಾಸಿ ದಿ| ಆನಂದ ಪೂಜಾರಿ ಅವರ ಪುತ್ರ ಪ್ರದೀಪ್ ಪೂಜಾರಿ (31) ಮೃತ ದುರ್ದೈವಿ.

ಭಾನುವಾರ ಸಂಜೆ ಮೂಡುಪೆರಾರ ಕಾಯಾರಣೆಯಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಪ್ರದೀಪ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಮೊದಲಿಗೆ ಕೈಕಂಬದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ನಂತರ ಬಜ್ಪೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಪ್ರದೀಪ್ ಪಡುಪೆರಾರ ಗ್ರಾಮ ಪಂಚಾಯತ್ ಉದ್ಯೋಗಿಯಾಗಿದ್ದು, ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯಾಭಿವೃದ್ಧಿ ಸಂಘದ ಮಂಗಳೂರು ತಾಲೂಕು ಸಮಿತಿಯ ಅಧ್ಯಕ್ಷರಾಗಿದ್ದರು. 2012ರಲ್ಲಿ ಪಡುಪೆರಾರ ಗ್ರಾಮ ಪಂಚಾಯಿತಿಗೆ ಸೇರಿದ ಪ್ರದೀಪ್, ಕಾಯರಣೆ ನವರಂಗ ಗೆಳೆಯರ ಬಳಗದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದು, ಬಜರಂಗದಳ ಹಾಗೂ ಜವನೆರ್ ಪೆರಾರ್ ಕಾರ್ಯಕರ್ತರಾಗಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

2 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

3 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

3 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

3 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

3 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

4 hours ago