ರಾಜ್ಯ ನ್ಯೂಸ್

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಜಗಳ ; ಚೂರಿಯಿಂದ ಇರಿದು ವ್ಯಕ್ತಿಯ ಭೀಕರ ಕೊಲೆ : ತಂದೆ ಮಗನ ಬಂಧನ – Vishwanews24

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಜಗಳ ; ಚೂರಿಯಿಂದ ಇರಿದು ವ್ಯಕ್ತಿಯ ಭೀಕರ ಕೊಲೆ : ತಂದೆ ಮಗನ ಬಂಧನ – Vishwanews24

ಮಂಗಳೂರು, : ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ತಂದೆ ಮಗ ನೆರೆಮನೆಯ ವ್ಯಕ್ತಿಯೋರ್ವರನ್ನು ಚೂರಿಯಿಂದ ಇರಿದು ಕೊಲೆಗೈದಿರುವ ಘಟನೆ ನ.03 ರ ತಡರಾತ್ರಿ ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ.

ಕಾರ್ ಸ್ಟ್ರೀಟ್ ಮಹಾಮ್ಮಾಯಿ ರಸ್ತೆಯಲ್ಲಿರುವ ವೀರ ವೆಂಕಟೇಶ ಅಪಾರ್ಟ್ಮೆಂಟ್ ನಿವಾಸಿ ವಿನಾಯಕ ಕಾಮತ್(44) ಕೊಲೆಯಾದವರು. ಅದೇ ಅಪಾರ್ಟ್ಮೆಂಟ್ ನಿವಾಸಿಗಳಾದ ತಂದೆ ಕೃಷ್ಣಾನಂದ ಕಿಣಿ ಹಾಗೂ ಮಗ ಅವಿನಾಶ್ ಕಿಣಿ ಕೊಲೆ ಆರೋಪಿಗಳು.

4 – 5 ದಿನಗಳ ಹಿಂದೆ ಅಪಾರ್ಟ್ ಮೆಂಟ್ ನ ಮುಂಭಾಗ ಮಂಗಳೂರು ಮನಪಾ ಸಿಮೆಂಟ್ ಹಾಕಿ ಸರಿ ಮಾಡಿದ್ದು ಇದರ ಮೇಲೆ ಬೇರೆಯವರ ಕಾರು ಹೋಗುವ ವಿಚಾರದಲ್ಲಿ ನಮ್ಮ ಆರೋಪಿಗಳು ತನ್ನ ಗಂಡನೊಂದಿಗೆ ಜಗಳ ಮಾಡಿದ್ದರು. ನ ೩ ರ ರಾತ್ರಿ ಅಪಾರ್ಟ್ ಮೆಂಟ್ ನಲ್ಲಿ ಕೆಲವರು ದೀಪಾವಳಿ ಆಚರಿಸುತ್ತಿದ್ದ ಸಂದರ್ಭ ವಿನಾಯಕ್ ಅಪಾರ್ಟ್ಮೆಂಟ್ ಕೆಳಗೆ ಹೋಗಿದ್ದಾರೆ. ಈ ಸಂದರ್ಭ ಪಾರ್ಕಿಂಗ್ ಸ್ಥಳದಲ್ಲಿದ್ದ ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರೊಂದಿಗೆ ಜಗಳವಾಡತೊಡಗಿದ್ದು, ಗಲಾಟೆ ಕೇಳಿ ನನ್ನ ಅತ್ತೆಯೂ ಕೆಳಕ್ಕೆ ಹೋದಾಗ ಅವರನ್ನು ತಳ್ಳಿ, ಕೃಷ್ಣಾನಂದ ಕಿಣಿ ತಮ್ಮ ಕೈಯಲ್ಲಿದ್ದ ಚೂರಿನಿಂದ ವಿನಾಯಕ ಕಾಮತ್ ಅವರ ಎದೆಗೆ ಚುಚ್ಚಿದ್ದಾರೆ , ಅವರ ಮಗ ಅವಿನಾಶ್ ಕಿಣಿ ಕೂಡ ದೂಷಿಸುತ್ತಾ ಕೊಲೆಗೆ ಸಹಕರಿಸಿದ್ದಾರೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಎಂದು ಮೃತರ ಪತ್ನಿ ಅಮಣಿ ಕಾಮತ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ವಿನಾಯಕ್ ಕಾಮತ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನ.೦೪ ರ 1.45 ರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ದೌಡಾಯಿಸಿದ ಬಂದರು ಠಾಣಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ಮುಂದುವರಿದಿದೆ.

 

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

12 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

12 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

12 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

15 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

15 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

15 hours ago