ಮಂಗಳೂರು: “ಎಲ್ಲರಿಗೂ ಲಸಿಕೆ, ಎಲ್ಲರಿಗೂ ಉಚಿತ” ಎಂಬುವುದನ್ನು ಕೇಂದ್ರ ಸರ್ಕಾರ ಪ್ರಚಾರ ಮಾಡುತ್ತಿದೆ, ಆದರೆ ವಾಸ್ತವ ಹೇಗಿದೆ ಅಂದರೆ ಉಚಿತವಾಗಿ ನೀಡಬೇಕಾದ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳ ಮೂಲಕ 850 ರೂ.ಗಳಿಗೆ ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಉಚಿತ ಲಸಿಕೆಯ ಜಾಹೀರಾತಿನ ಕೆಳಗಡೆ ದ.ಕ.ಜಿಲ್ಲಾ ಕಾಂಗ್ರೆಸ್ ಕೋವಿಡ್ 19 ಹೆಲ್ಪ್ ಲೈನ್ ವತಿಯಿಂದ ಸಂಚಾಲಕರಾದ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ಕೋವಿಡ್ ಲಸಿಕೆ ವಿಚಾರದಲ್ಲಿ ವ್ಯಾಪಾರೀಕರಣ ಮಾಡದೆ ಸರ್ವರಿಗೂ ಉಚಿತ ಲಸಿಕೆ ನೀಡಬೇಕೆಂದು ಆಗ್ರಹಿಸಿ ಮಂಗಳೂರಿನಲ್ಲಿ ನಡೆದ ವಿಶಿಷ್ಟ ಪ್ರತಿಭಟನಾ ಸಭೆ ನಡೆಯಿತು.
ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಹರೀಶ್ ಕುಮಾರ್, ಮಾಜಿ ಸಚಿವರಾದ ಯು.ಟಿ.ಖಾದರ್ ರವರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಮುಖಂಡರಗಳಾದ ಶಶೀಧರ್ ಹೆಗ್ಡೆ, ನವೀನ್ ಡಿ’ಸೋಜಾ, ಮಹಮ್ಮದ್ ಕುಂಜತ್ತಬೈಲ್, ಶಾಹುಲ್ ಹಮೀದ್, ಅಪ್ಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.ಸರಕಾರ ಕೋವಿಡ್ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡುತ್ತಿದೆ. ಲಸಿಕೆಯನ್ನು ಭಾರತದ ಪ್ರತಿಯೊಬ್ಬ ಪ್ರಜೆಗಳಿಗೂ ಉಚಿತವಾಗಿ ನೀಡಬೇಕು ಎಂದು ಆಗ್ರಹಿಸಿ ನಡೆದ ಪ್ರತಿಭಟನೆ. ಈ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಗೀತಾ ಅತ್ತಾವರ್, ಶೋಭಾ ಕೇಶವ್ , ಕುಮಾರಿ ಅಪ್ಪಿ, ಸಂಜನಾ ಚಲವಾದಿ, ಪ್ರವೀತಾ , ಥೆರೇಸಾ ಮುಂತಾದವರು ಭಾಗವಹಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…