ಮಂಗಳೂರು: ಖಾಸಗಿ ಆಸ್ಪತ್ರೆಯ ವೈದ್ಯರು ಬದುಕಿ ಉಳಿಯುವುದೇ ಇಲ್ಲ ಎಂದು ಕೈಚೆಲ್ಲಿ ಬಿಟ್ಟ ವಿಶೇಷ ಚೇತನ ಮಗುವೊಂದನ್ನು ದ.ಕ. ಜಿಲ್ಲಾ ವೆನ್ಲಾಕ್ ಕೋವಿಡ್ ಆಸ್ಪತ್ರೆಯ ವೈದ್ಯರು ವಿಶೇಷ ಚಿಕಿತ್ಸೆಗೆ ಒಳಪಡಿಸಿ ಕೊರೊನಾ ಸೋಂಕಿನಿಂದ ಗುಣಮುಖಗೊಳಿಸಿದ್ದಾರೆ. ಸೋಂಕಿನಿಂದ ವಾಸಿಯಾದ ಈ ಮಗುವಿನ ಪೋಷಕರು, ಕುಟುಂಬಸ್ಥರು ಆಸ್ಪತ್ರೆಯಲ್ಲಿ ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದ ಅಪರೂಪದ ಘಟನೆ ನಡೆದಿದೆ.
ನಗರದ ಕೃಷ್ಣಾಪುರದ ವಿಶೇಷ ಚೇತನ ಮಗುವೊಂದಕ್ಕೆ ಕೊರೊನಾ ಸೋಂಕು ತಗುಲಿತ್ತು. ಜೊತೆಗೆ ನ್ಯುಮೋನಿಯಾವೂ ಇದ್ದು, ಆರೋಗ್ಯ ತುಂಬಾ ಹದಗೆಟ್ಟಿತ್ತು. ಮಗುವನ್ನು ತಕ್ಷಣ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದರು. ಮಗು ಬದುಕಿ ಉಳಿಯುವ ಸಾಧ್ಯತೆ ಕಡಿಮೆ ಎಂದು ವೈದ್ಯರು ಕೈಚೆಲ್ಲಿ ಬಿಟ್ಟರಂತೆ.
ಇದರಿಂದ ಕಂಗಾಲಾದ ಕುಟುಂಬದ ಸದಸ್ಯರು ಮಗುವನ್ನು ಅಲ್ಲಿಂದ ಬಿಡುಗಡೆ ಮಾಡಿ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಬಾಸಿತ್ ಅಲಿ ನೇತೃತ್ವದ ವೈದ್ಯರ ತಂಡ ಮಗುವಿಗೆ ಚಿಕಿತ್ಸೆ ನೀಡಲು ಮುಂದಾಯಿತು.
ವೈದ್ಯರ, ಶುಶ್ರೂಷಕರ ಮಾನವೀಯ ಸೇವೆಯಿಂದ ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಇದೀಗ 15 ದಿನಗಳ ಬಳಿಕ ಮಗು ಆಸ್ಪತ್ರೆಯಿಂದ ಬಿಡುಗಡೆಗೊಂಡಿದೆ. ಮಗು ಕೊರೊನಾ ಗೆದ್ದು ಬಂದಿರೋದನ್ನು ಕಂಡ ಕುಟುಂಬದ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಈ ಸಂದರ್ಭ ವೈದ್ಯರು ಮತ್ತು ಮಗುವಿನ ಕುಟುಂಬದ ಸದಸ್ಯರು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…