ಮಂಗಳೂರು: ಖಾಸಗಿ ಬಸ್‌ಗಳಲ್ಲಿ ಕಂಡಕ್ಟರ್ ಟಿಕೆಟ್ ನೀಡದಿದ್ದರೆ ಪ್ರಯಾಣ ದರವನ್ನು ನೀಡದೆ ಉಚಿತವಾಗಿ ಪ್ರಯಾಣಿಸಿ. ನಿರ್ವಾಹಕರು ಕಿರುಕುಳ ನೀಡಿದಲ್ಲಿ ಬಸ್ ಮಾಲಕರ ಸಂಘದ ಮುಖ್ಯಸ್ಥರ ವಾಟ್ಸಾಪ್ ನಂಬರಿಗೆ ಬಸ್ ನಂಬರು ಸಹಿತ ದೂರು ನೀಡಿ ಎಂದು ಪೊಲೀಸ್ ಆಯುಕ್ತ ಡಾ| ಹರ್ಷ ಖಡಕ್ ಸೂಚನೆ ನೀಡಿದ್ದಾರೆ.
ಶುಕ್ರವಾರ ತಮ್ಮ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸುದ್ದಿ ಗಾರರ ಪ್ರಶ್ನೆಗೆ ಉತ್ತರಿಸಿ ‘ಮೋಟಾರು ವಾಹನ ಕಾಯ್ದೆ ಮತ್ತು ನಿಯಮಗಳ ಪ್ರಕಾರ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಟಿಕೆಟ್ ನೀಡುವುದು ಕಡ್ಡಾಯ. ವಾಟ್ಸ್ ಆ್ಯಪ್ ಸಂಖ್ಯೆ 7996999977 ಮೂಲಕ ಪ್ರಯಾಣಿಕರು ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲೀಕರ ಸಂಘಕ್ಕೆ ದೂರು ಸಲ್ಲಿಸಬಹುದು’ ಎಂದರು.
ನಗರದ ವ್ಯಾಪ್ತಿಯಲ್ಲಿ ಖಾಸಗಿ ಬಸ್‌ಗಳಲ್ಲಿ ಟಿಕೆಟ್ ಕೊಡದಿದ್ದರೆ ಪ್ರಯಾಣಿಕರು ಬಸ್ ಮಾಲೀಕರ ಸಂಘದ ಮೊಬೈಲ್ ಸಂಖ್ಯೆಗೆ ನೇರವಾಗಿ ದೂರು ಕೊಡಬಹುದು. ಸಂಚಾರ ವಿಭಾಗದ ಪೊಲೀಸ್ ಇನ್‌ಸ್ಪೆಕ್ಟರ್‌ಗಳು ವಾರಕ್ಕೊಮ್ಮೆ ಈ ದೂರುಗಳನ್ನು ಪರಿಶೀಲಿಸಿ ಕ್ರಮ ಜರುಗಿಸುತ್ತಾರೆ. ‘ನಿರ್ವಾಹಕರು ಟಿಕೆಟ್ ನೀಡಿದಿದ್ದರೆ ಹಣ ನೀಡಬೇಡಿ’ ಎಂದು ಬಸ್ ಮಾಲೀಕರ ಸಂಘ ಸೆಪ್ಟೆಂಬರ್ ತಿಂಗಳಿನಲ್ಲೇ ಮನವಿ ಮಾಡಿತ್ತು. ಆದರೂ, ಟಿಕೆಟ್ ನೀಡದೇ ಬಸ್ ಓಡಿಸುವ ಪ್ರವೃತ್ತಿ ನಗರದಲ್ಲಿ ಯಥಾವತ್ತಾಗಿ ಮುಂದುವರಿದಿದೆ.
ಟಿಕೆಟ್ ರಹಿತ ಪ್ರಯಾಣವನ್ನು ಅಕ್ರಮ ಎಂದು ಪರಿಗಣಿಸಲಾಗುತ್ತದೆ. ನಗರ ಸಾರಿಗೆ ಬಸ್‌ಗಳಲ್ಲಿ ನಿರ್ವಾಹಕರು ಹಣ ಪಡೆದು ಟಿಕೆಟ್ ನೀಡುವುದಿಲ್ಲ ಎಂಬುದಾಗಿ ನಿತ್ಯವೂ ಹತ್ತಾರು ದೂರು ಗಳು ಬರುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದರು.
ರಾಜವರ್ಮ ಬಲ್ಲಾಳ್, ದಿಲ್‌ರಾಜ್ ಆಳ್ವ, ಡಿಸಿಪಿಗಳಾದ ಅರುಣಾಂಶು ಗಿರಿ, ಲಕ್ಷ್ಮೀ ಪ್ರಸಾದ್, ಎಸಿಪಿಗಳಾದ ಮಂಜುನಾಥ ಶೆಟ್ಟಿ, ವಿನಯ್ ಎ. ಗಾಂವ್‌ಕರ್, ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ಜಿ.ಕೆ. ಭಟ್, ಅಮಾನುಲ್ಲಾ, ಮೋಹನ್ ಕೊಟ್ಟಾರಿ, ಗುರುದತ್ತ ಕಾಮತ್, ಎಎಸ್‌ಐ ಬಾಲಕೃಷ್ಣ, ಹೆಡ್ ಕಾನ್ ಸ್ಟೆಬಲ್ ಪುರುಷೋತ್ತಮ ಉಪಸ್ಥಿತರಿದ್ದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…