Featured

ಮಂಗಳೂರು : ಖಾಸಗಿ ಬಸ್‌ ಪ್ರಯಾಣ ದರ ಏರಿಕೆ ತಡೆಹಿಡಿಯಲು ಮನವಿ -Vishwanews24

ಮಂಗಳೂರು : ಖಾಸಗಿ ಬಸ್‌ ಪ್ರಯಾಣ ದರ ಏರಿಕೆ ತಡೆಹಿಡಿಯಲು ಮನವಿ -Vishwanews24

ಮಂಗಳೂರು: ಖಾಸಗೀ ಬಸ್ ಪ್ರಯಾಣ ದರದ ವಿಪರೀತ ಏರಿಕೆಯನ್ನು ಖಂಡಿಸಿ, ದ.ಕ.ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ, ದಕ.ಜಿಲ್ಲೆಯ ಜಾತ್ಯಾತೀತ ಪಕ್ಷಗಳ ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿಯನ್ನು ನೀಡಲಾಯಿತು.

ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆಯದೆ ಏಕಾಏಕಿಯಾಗಿ ಬಸ್ ಪ್ರಯಾಣ ದರವನ್ನು ಏರಿಸಿದ್ದು ಸರ್ವಥಾ ಸರಿಯಲ್ಲ. ಕೊರೋನಾ ಸಂಕಷ್ಟದ ಕಾಲಘಟ್ಟದಲ್ಲಿ ಜಿಲ್ಲೆಯ ಲಕ್ಷಾಂತರ ಜನತೆ ಉದ್ಯೋಗವಿಲ್ಲದೆ ಆರ್ಥಿಕ ಸಮಸ್ಯೆಯಿಂದ ತೀವ್ರವಾಗಿ ಕಂಗೆಟ್ಟಿರುವಾಗ ಜಿಲ್ಲಾಧಿಕಾರಿ ಗಳು ಕೇವಲ ನೂರಾರು ಸಂಖ್ಯೆಯಲ್ಲಿರುವ ಬಸ್ ಮಾಲಕರ ನೋವಿಗೆ ಸ್ಪಂದಿಸುವ ನೆಪದಲ್ಲಿ ಸಾರಿಗೆ ಪ್ರಾಧಿಕಾರದ ನಿಯಮಗಳನ್ನು ಉಲ್ಲಂಘಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಸರ್ವ ರಾಜಕೀಯ ಪಕ್ಷಗಳು,ಕೂಡಲೇ ಏರಿಸಿದ ದರವನ್ನು ತಡೆ ಹಿಡಿದು,ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆದು ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಬೇಕೆಂದು ಒಕ್ಕೊರಲಿನಿಂದ ಒತ್ತಾಯಿಸಲಾಯಿತು .

ನಿಯೋಗದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಸದಾಶಿವ ಉಳ್ಳಾಲ್,ಶಶಿಧರ್ ಹೆಗ್ಡೆ, ನೀರಜ್ ಪಾಲ್,CPIM ನಾಯಕರಾದ ವಸಂತ ಆಚಾರಿ, ಸುನಿಲ್ ಕುಮಾರ್ ಬಜಾಲ್, CPI ಮುಖಂಡರಾದ ಕರುಣಾಕರ್,ಜಗತ್ಪಾಲ್, ಜಾತ್ಯಾತೀತ ಜನತಾದಳದ ಮುಖಂಡರಾದ ಸುಮತಿ ಎಸ್ ಹೆಗ್ಡೆ,ಅಲ್ತಾಫ್ ತುಂಬೆ,DYFI ನಾಯಕರಾದ ಮುನೀರ್ ಕಾಟಿಪಳ್ಳ,ಸಂತೋಷ್ ಬಜಾಲ್,ದಲಿತ ಸಂಘಟನೆಗಳ ನಾಯಕರಾದ ಎಂ.ದೇವದಾಸ್, ರಘು ಎಕ್ಕಾರು,ತಿಮ್ಮಯ್ಯ ಕೊಂಚಾಡಿ ಉಪಸ್ಥಿತರಿದ್ದರು .

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

12 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

12 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

13 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

13 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

13 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

13 hours ago