ಮಂಗಳೂರು: ಇಲ್ಲಿನ ಸ್ಟೇಟ್ ಬ್ಯಾಂಕ್ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ಬಳಿ ಖಾಸಗಿ ಬಸ್ ಕಂಡಕ್ಟರ್ ಮೃತದೇಹ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಮೃತರನ್ನು ರಾಜೇಶ್(30) ಎಂದು ಗುರುತಿಸಲಾಗಿದೆ.
ರಾಜೇಶ್ ಅವರು ಮಂಗಳೂರು ಮತ್ತು ವಿಟ್ಲದ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಯಾವುದೋ ವಿಚಾರಕ್ಕೆ ಗಲಾಟೆಯಾಗಿ ಅಥವಾ ಲೂಟಿ ಮಾಡುವ ಸಂದರ್ಭ ಪ್ರತಿರೋಧ ಒಡ್ಡಿರುವುದಕ್ಕೆ ದುಷ್ಕರ್ಮಿಗಳು ರಾಜೇಶ್ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.;
ರಾಜೇಶ್ ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿರುವುದರಿಂದ ಅವರ ದೇಹಕ್ಕೆ ತೀವ್ರ ಗಾಯವಾಗಿದೆ. ಮೃತದೇಹವನ್ನು ವೆನ್‌ಲಾಕ್ ಶವಾಗಾರದಲ್ಲಿರಿಸಲಾಗಿದೆ. ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.
ರಾಜೇಶ್ ಅವರು ಪ್ರತೀ ವರ್ಷವೂ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಮಾಲೆ ಧರಿಸಿ ಹೋಗುತ್ತಿದ್ದರು. ಅವರು ಸರಳ ಸ್ವಭಾವದವರಾಗಿದ್ದು ಎಲ್ಲರೊಂದಿಗೂ ಆತ್ಮೀಯವಾಗಿ ಬೆರೆಯುತ್ತಿದ್ದರು ಎಂದು ಸಹೋದ್ಯೋಗಿ ಮಿತ್ರರು ತಿಳಿಸಿದ್ದಾರೆ.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…