ಮಂಗಳೂರು: ಮುಲ್ಕಿ ಹಳೆಯಂಗಡಿ ಸಮೀಪದ ಪಾವಂಜೆ ನಿವಾಸಿ ಖ್ಯಾತ ಸಂಶೋಧಕ, ಸಾಹಿತಿ, ನಿವೃತ್ತ ಉಪನ್ಯಾಸಕ ಡಾ. ಕೆ. ಜಿ. ವಸಂತ ಮಾಧವ (88) ಅವರು ಬುಧವಾರ ರಾತ್ರಿ ಬೆಂಗಳೂರಿನ ಪುತ್ರಿಯ ಮನೆಯಲ್ಲಿ ನಿಧನರಾದರು.
ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪ್ರೊ. ಡಾ. ಕೆ.ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ)ರವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಮತ್ತು ಕೆನರಾದ ರಾಜಕೀಯ ಇತಿಹಾಸ : 1565-1763 ಎನ್ನುವ ವಿಷಯದ ಮೇಲೆ ಮಹಾಪ್ರಬಂಧವನ್ನು ರಚಿಸಿ ಪಿಎಚ್.ಡಿ. ಪದವಿಯನ್ನು ಪಡೆದಿದ್ದರು. ಮುಲ್ಕಿ ವಿಜಯಾ ಕಾಲೇಜಿನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ 32 ವರ್ಷ ಕರ್ತವ್ಯ ನಿರ್ವಹಿಸಿದ ವಸಂತ ಮಾಧವರು, ನಿವೃತ್ತಿಯ ನಂತರ ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಪ್ರೊಫೆಸರ್‌ರಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ.
ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸುಮಾರು ಇಪ್ಪತ್ತರಷ್ಟು ಇತಿಹಾಸ ಕೃತಿಗಳನ್ನು ಮತ್ತು ಸಾವಿರಾರು ಲೇಖನಗಳನ್ನು ಬರೆದಿದ್ದಾರೆ. ವಸಂತ ಮಾಧವರ ಕುರಿತಾದ ಕೃತಿಯನ್ನು ಡಾ. ಎಸ್. ಪದ್ಮನಾಭ ಭಟ್ಟರು ರಚಿಸಿದ್ದು ನಾಡಿಗೆ ನಮಸ್ಕಾರ ಗ್ರಂಥಮಾಲೆಯಡಿ ಕಾಂತಾವರ ಕನ್ನಡ ಸಂಘ ಪ್ರಕಟಿಸಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…