Featured

ಮಂಗಳೂರು: ಗಂಜಿಮಠ ಗ್ರಾ.ಪಂ ಸದಸ್ಯ ಸಂದೀಪ್ ಶೆಟ್ಟಿ ಮೊಗರು ನೇಣು ಬಿಗಿದು ಆತ್ಮಹತ್ಯೆ – Vishwanews24

ಮಂಗಳೂರು: ಗಂಜಿಮಠ ಗ್ರಾ.ಪಂ ಸದಸ್ಯ ಸಂದೀಪ್ ಶೆಟ್ಟಿ ಮೊಗರು ಆತ್ಮಹತ್ಯೆ

ಮಂಗಳೂರು: ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.

ಮೃತರನ್ನು ಸಂದೀಪ್ ಶೆಟ್ಟಿ ಮೊಗರು(35) ಎಂದು ಗುರುತಿಸಲಾಗಿದೆ.

ಗಂಜಿಮಠ ಗ್ರಾಮ ಪಂಚಾಯತ್ ನ ಮೊಗರು 9ಮತ್ತು 10 ನೇ ವಾರ್ಡ್ ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಸಂದೀಪ್ ಶೆಟ್ಟಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗದಲ್ಲಿರುವ ತನ್ನ ಕಟೀಲೇಶ್ವರಿ ಸೇವಾ ಸಿಂದು ಕಚೇರಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬುಧವಾರ ಮಧ್ಯಾಹ್ನದಿಂದ ಸಂದೀಪ್ ಕಾಣೆಯಾಗಿದ್ದು, ಹುಡುಕಾಟ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಸೇವಾ ಸಿಂದು ಕೇಂದ್ರ ನಡೆಸುತ್ತಿದ್ದ, ಅವಿವಾಹಿತ ಸಂದೀಪ್ ಶೆಟ್ಟಿ ಇನ್ಶೂರೆನ್ಸ್ ಏಜೆಂಟರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು. ವ್ಯಾವಹಾರಿಕ ಸಮಸ್ಯೆಗಳು ಆತ್ಮಹತ್ಯೆಗೆ ಕಾರಣವೆನ್ನಲಾಗಿದ್ದು, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ಬಹಿರಂಗವಾಗಬೇಕಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

1 hour ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

2 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

3 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

3 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

3 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

3 hours ago