ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ – vishwanews24

Featured, ರಾಜ್ಯ ನ್ಯೂಸ್

ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು: ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸುವ ಮೂಲಕ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ, ಅದರಂತೆ ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಗುರುವಾರ(ನ.21) ಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಎಸ್ ಪಿ ನಟರಾಜ್ ನೇತೃತ್ವದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಮಂಗಳೂರಿನ ವೆಲೆನ್ಸಿಯಾದಲ್ಲಿರುವ‌ ಮನೆಗೆ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ಉಡುಪಿ: ಶರಣಾಗತಿ ನಿಮಗಿರುವ ಒಂದೇ ಒಂದು ದಾರಿ : ನಕ್ಸಲರಿಗೆ ಡಿಜಿಪಿ ಪ್ರಣಬ್ ಮೊಹಂತಿ ಎಚ್ಚರಿಕೆ – vishwanews24

ಕಳೆದ ಎರಡು ತಿಂಗಳ ಹಿಂದೆಯಷ್ಟೇ ಮಂಗಳೂರಿಗೆ ವರ್ಗಾವಣೆಯಾಗಿ ಬಂದಿದ್ದ ಕೃಷ್ಣವೇಣಿ ಅವರು ವೇಲೆನ್ಸಿಯಾದಲ್ಲಿರುವ ಫ್ರೆಡ್ ರೋಸ್ ಎನ್ಕಲೇವ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದು, ದಾಳಿ ನಡೆಸಿದ ತಂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.

ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳ ತಂಡ ಮೂರು ವಾಹನಗಳಲ್ಲಿ ಆಗಮಿಸಿ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದೆ.

ಭಾರತದಲ್ಲಿ ಆನ್‌ಲೈನ್ ಗೇಮಿಂಗ್: ತಂತ್ರಜ್ಞಾನ, ನೀತಿ ಮತ್ತು ಸವಾಲುಗಳು’ ಪುಸ್ತಕ ಬಿಡುಗಡೆ ಮಾಡಿದ ಎನ್‌ಯುಜೆಎಸ್‌ – vishwanews24

Leave a Reply