ಮಂಗಳೂರು: ಗಣೇಶೋತ್ಸವ ಸಂಭ್ರಮ ಆರಂಭವಾಗಿದ್ದು, ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ ಸಂಪೂರ್ಣ ಬಂದೋಬಸ್ತ್ ಮಾಡಲಾಗಿದೆ. ಸಾರ್ವಜನಿಕರು ಈಗಾಗಲೇ ಗಣೇಶೋತ್ಸವಕ್ಕೆ ಸಂಬಂಧಿಸಿ ಸರಕಾರ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಿಸಬೇಕು ಎಂದು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ಮನವಿ ಮಾಡಿದ್ದಾರೆ.
ಕೋವಿಡ್‌ನ ಈ ಸಂದರ್ಭದಲ್ಲಿ ಜನರು ಈ ರೋಗದ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಇಲಾಖೆಯಿಂದ ಬಂದೋಬಸ್ತ್ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಪಿ, ಸಿಎಆರ್, ಆರ್‌ಎಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಡಿಸಿಪಿ ನೇತೃತ್ವದಲ್ಲಿ ಈಗಾಗಲೇ ರೂಟ್ ಮಾರ್ಚ್‌ಗಳನ್ನು ನಡೆಸಲಾಗುತ್ತಿದೆ. ಉಳ್ಳಾಲದಲ್ಲಿ ನಿನ್ನೆ ನಡೆದಿದ್ದು, ಸುರತ್ಕಲ್‌ನಲ್ಲಿಯೂ ನಡೆಸಲಾಗುವುದು. ಆಚರಣೆಯನ್ನು ಶಾಂತವಾಗಿ, ಸುರಕ್ಷಿತವಾಗಿ ಆಚರಿಸುವ ನಿಟ್ಟಿನಲ್ಲಿ ಈಗಾಗಲೇ ಗಣ್ಯ ವಕ್ತಿಗಳ ಶಾಂತಿ ಸಭೆಯನ್ನು ಮಾಡಲಾಗಿದೆ. ಬೀಟ್ ಮಟ್ಟದಿಂದ ಪೊಲೀಸ್ ಆಯುಕ್ತಾಲಯದವರೆಗಿನ ಸಂಪರ್ಕ ಸಂಖ್ಯೆಗಳಿಗೆ ಯಾವುದೇ ಸಮಸ್ಯೆ, ಅನುಮಾನಗಳಿಗೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ. ಜಿಲ್ಲಾ ಪೊಲೀಸರ ಸಹಭಾಗಿತ್ವದೊಂದಿಗೆ ನಗರ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದರು.
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…