ಮಂಗಳೂರು: ಗಣೇಶ ಚತುರ್ಥಿ ಆಚರಣೆಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ ಬದಲು 19ರಂದು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ.
ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮನವಿ ಮೇರೆಗೆ ಸಚಿವರು ಈ ಸೂಚನೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ರಜೆ ಬದಲಾವಣೆ ಕುರಿತಂತೆ ನಿರ್ಧಾರ ಇನ್ನೂ ಆಗಿಲ್ಲ.
ಯು.ಟಿ. ಖಾದರ್ ಮನವಿ
ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಗಣೇಶೋತ್ಸವವನ್ನು ಸೆ. 19ರಂದು ಆಚರಿಸಲಾಗುವ ಹಿನ್ನೆಲೆಯಲ್ಲಿ ಸಾರ್ವತ್ರಿಕ ರಜೆಯನ್ನು ಸೆ. 19ರಂದೇ ನೀಡುವಂತೆ ಸ್ಪೀಕರ್ ಖಾದರ್ ಅವರಲ್ಲಿ ಕೋರಿದ್ದ ಹಿನ್ನೆಲೆಯಲ್ಲಿ ತತ್‌ಕ್ಷಣವೇ ಸ್ಪಂದಿಸಿದ ಅವರು ಸಿಎಂ ಸಿದ್ದರಾಮಯ್ಯ ಅವರಲ್ಲಿ ಮಾತುಕತೆ ನಡೆಸಿ ಸೆ. 19ರಂದೇ ರಜೆ ನೀಡುವ ಆಶಾಭಾವ ವ್ಯಕ್ತಪಡಿಸಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…