ಮಂಗಳೂರು:ವಿದ್ಯುತ್ ಆಘಾತಕ್ಕೆ ಒಳಗಾಗಿ ಯುವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿ ಆಶ್ನಿ ಶೆಟ್ಟಿ (20) ಮೃತಪಟ್ಟವರು. ಇವರು ಸಿಎ ಅಭ್ಯಾಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಹರೀಶ್ ಸಣ್ಣ ಪ್ರಮಾಣದ ಹೈನುಗಾರಿಕೆ ನಡೆಸುತ್ತಿದ್ದು ಎಂದಿನಂತೆ ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ದನಗಳನ್ನು ಮೇಯಿಸಲು ಮನೆಯಿಂದ ಹೊರಟಿದ್ದರು. ಈ ವೇಳೆ ಅವರೊಂದಿಗೆ ಮನೆಯ ನಾಯಿಯೂ ತೆರಳಿತ್ತು.
ತಂದೆಯೊಂದಿಗೆ ಹೊರಟಿದ್ದ ನಾಯಿಯನ್ನು ಕರೆತರಳೆಂದು ಆಶ್ನಿ ತೆರಳಿದ್ದರು. ನಾಯಿ ನೀರು ತುಂಬಿದ್ದ ಗದ್ದೆಗೆ ಇಳಿದಾಗ ಆಶ್ನಿ ಕೂಡಾ ಗದ್ದೆಗೆ ಕಾಲಿಟ್ಟಿದ್ದಾಳೆ. ಈ ವೇಳೆ ವಿದ್ಯುತ್ ಆಘಾತ ಸಂಭವಿಸಿ ಆಶ್ನಿ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ.
ಗದ್ದೆಯಲ್ಲಿದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯೊಂದು ತುಂಡಾಗಿ ಗದ್ದೆಗೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಮೆಸ್ಕಾಂಗೆ ಮಾಹಿತಿ ನೀಡಿದ್ದು, ವಿದ್ಯುತ್ ಕಡಿತಗೊಳಿಸಿದ ಬಳಿಕ ನಾಯಿ ಮತ್ತು ಆಶ್ನಿ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಯಿತು ಎಂದು ತಿಳಿದುಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…