ಮಂಗಳೂರು: ಹನ್ನೊಂದು ವರ್ಷಗಳಿಂದ ನನಗೆ ಇದ್ದ ಗನ್ ಮ್ಯಾನ್ ಭದ್ರತೆಯನ್ನು ಚುನಾವಣೆ ಘೋಷಣೆಯಾದ ದಿನದಿಂದ ವಾಪಸ್ ಪಡೆಯಲಾಗಿದ್ದು ಇದರಿಂದ ಭಯ ಉಂಟಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದ್ದಾರೆ.
ಸೋಮವಾರ ತಾಯಿ ಜತೆ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, 2012 ರಲ್ಲಿ ಅಕಾಡೆಮಿ ಅಧ್ಯಕ್ಷನಾಗಿದ್ದಾಗ ಏಳು ಮಂದಿಯ ತಂಡ ಕಚೇರಿಗೆ ನುಗ್ಗಿ ಯದ್ವಾತದ್ವಾ ಕೊಚ್ಚಿ ಕೊಲೆಯತ್ನ ನಡೆಸಿತ್ತು. ಅದರಲ್ಲಿ ಇಬ್ಬರು ಆರೋಪಿಗಳ ಆರೋಪ ಸಾಬೀತಾಗಿ ನ್ಯಾಯಾಲಯ ನಾಲ್ಕೂವರೆ ವರ್ಷ ಸಜೆ ವಿಧಿಸಿದೆ. ಆರೋಪಿಗಳು ಇದರ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲಿ ತೀರ್ಪು ಬರುವ ಮೊದಲೇ ಗನ್ ಮ್ಯಾನ್ ಭದ್ರತೆ ವಾಪಸ್ ಪಡೆದುಕೊಳ್ಳಲಾಗಿದೆ.
ನನಗೆ ಬಂದಿರುವ ಬೆದರಿಕೆ ಕರೆಗಳ ಪೈಕಿ ಗಂಭೀರವಾದ ಬೆದರಿಕೆ ಬಗ್ಗೆ 30 ಕ್ಕಿಂತಲೂ ಅಧಿಕ ದೂರುಗಳು ಮಂಗಳೂರು ದಕ್ಷಿಣ ಠಾಣೆ, ಹುಬ್ಬಳ್ಳಿ ಮೊದಲಾದೆಡೆ ದಾಖಲಾಗಿದೆ. ಆದರೂ ಗನ್ ಮ್ಯಾನ್ ವಾಪಸ್ ಪಡೆದಿರುವುದು ಆಶ್ಷರ್ಯವನ್ನುಂಟು ಮಾಡಿದೆ. ದುಷ್ಕರ್ಮಿಗಳ ಭಯದಿಂದ ತಾಯಿಯೊಂದಿಗೆ ಓಡಾಡುತ್ತಿದ್ದೇನೆ ಎಂದವರು ಹೇಳಿದ್ದಾರೆ.
ನಾನು ಯಾವುದೇ ಧರ್ಮ, ಸಮುದಾಯದವರ ವಿರುದ್ದವಾಗಿ ನಡೆದುಕೊಂಡಿಲ್ಲ. ಕೆಲವರು ನನ್ನ ವಿಚಾರಗಳನ್ನು ತಪ್ಪಾಗಿ ತಿಳಿದುಕೊಂಡು ನನ್ನ ಹತ್ಯೆಗೆ ಯತ್ನಿಸುತ್ತಿದ್ದರೆ ಅವರ ಕ್ಷಮೆ ಕೋರುತ್ತೇನೆ. ತಾಯಿಗಾಗಿ ನಾನು ಬದುಕಬೇಕಾಗಿದೆ. ನಾನು ರಾಷ್ಟ್ರೀಯತೆಗೆ ಪೂರಕವಾದ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇನೆಯೇ ಹೊರತು ಯಾರ ಮನ ನೋಯಿಸುವ ಕೆಲಸವನ್ನು ಮಾಡಿಲ್ಲ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ತೊರೆಯುವುದಿಲ್ಲ. ನನಗೆ ಎರಡು ಬಾರಿ ಬ್ಯಾರಿ ಅಕಾಡೆಮಿಯ ಅಧ್ಯಕ್ಷ ಸ್ಥಾನ ನೀಡಿದ ಬಿಜೆಪಿಗೆ ಸದಾ ಋಣಿಯಾಗಿದ್ದೇನೆ. ಬೇರೆ ರಾಜಕೀಯ ಪಕ್ಷ ಸೇರುವುದಿಲ್ಲ. ನನಗೆ ಗನ್ ಮ್ಯಾನ್ ಭದ್ರತೆ ಮುಂದುವರೆಸುವಂತೆ ಡಿಸಿಪಿಯವರಿಗೆ ಮನವಿ ಮಾಡಿದ್ದೇನೆ. ಆದರೂ ಪ್ರಯೋಜನವಾಗಿಲ್ಲ. ನನ್ನ ಜೀವಕ್ಕೆ ಅಪಾಯ ಸಂಭವಿಸಿದರೆ ಯಾರೂ ಕಾರಣರಲ್ಲ, ನನ್ನ ಆಯುಷ್ಯವೇ ಕಾರಣವಾಗಿರುತ್ತದೆ ಎಂದು ರಹೀಂ ಉಚ್ಚಿಲ್ ಹೇಳಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…