ಮಂಗಳೂರು ಗಲಭೆ ಪ್ರಕರಣ : 22 ಆರೋಪಿಗಳಿಗೆ ಜಾಮೀನು; ಪೊಲೀಸರ ಮೇಲೆ ಎಫ್‍ಐಆರ್ ದಾಖಲಿಗೆ ಸೂಚನೆ -Vishwanews24

ಬೆಂಗಳೂರು: ಸಿಎಎ ವಿರೋಧಿಸಿ ಪ್ರತಿಭಟನೆ ಸಂದರ್ಭದಲ್ಲಿ ಹಿಂಸಾಚಾರ ನಡೆದು ಮಂಗಳೂರಿನಲ್ಲಿ ಗೋಲಿಬಾರ್ ಆಗಿತ್ತು. ಗೋಲಿಬಾರ್ ನಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಹಿಂಸಾಚಾರಕ್ಕೆ ಕಾರಣವಾಗಿದ್ದ ಎನ್ನಲಾದ 22 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರ ಕ್ರಮ ಸರಿಯಲ್ಲ ಅಂತ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳ ಬಂಧನ ಮಾಡುವಾಗ ಪೊಲೀಸರು ಸರಿಯಾದ ಕ್ರಮವನ್ನು ಕೈಗೊಂಡಿಲ್ಲ. ಆರೋಪಿಗಳು ಗಲಭೆಯಲ್ಲಿ ಭಾಗಿಯಾಗಿರೋದಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಒದಗಿಸಿಲ್ಲದೆ ಇರೋ ಅಂಶಗಳನ್ನು ಪರಿಗಣಿಸಿದ ನ್ಯಾಯಾಲಯ ಎಲ್ಲಾ 22 ಆರೋಪಿಗಳಿಗೆ ಜಾಮೀನನ್ನು ಮಂಜೂರು ಮಾಡಿದೆ..

ಸಾಕ್ಷ್ಯ ಎಂದು ಪರಿಗಣಿಸಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿಗಳು ನೇರವಾಗಿ ಭಾಗಿಯಾಗಿದ್ದಾರೆ ಅನ್ನೋದಕ್ಕೆ ಸಾಕ್ಷ್ಯ ಇಲ್ಲ ಎಂದು ಏಕ ಸದಸ್ಯ ಪೀಠ ಅಭಿಪ್ರಾಯ ಪಟ್ಟು ಜಾಮೀನನ್ನು ಮಂಜೂರು ಮಾಡಿದೆ.

ಪೊಲೀಸರ ವಿರುದ್ಧ ಎಫ್‍ಐಆರ್: ಮಂಗಳೂರು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಂಗಳೂರು ಪೊಲೀಸರಿಗೆ ದೊಡ್ಡ ಶಾಕ್ ನೀಡಿದೆ. ಮಂಗಳೂರು ಗಲಭೆ ನೆಪದಲ್ಲಿ ಪೊಲೀಸರು ಅಮಾಯಕರ ಮೇಲೆ ಹಲ್ಲೆ ಮಾಡಿದ್ದಾರೆ. ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ ಕೊಟ್ಟಿದ್ದಾರೆ. ಈ ಹಿಂಸೆ ಅನುಭವಿಸಿದವರು ಪೊಲೀಸರ ವಿರುದ್ಧ ದೂರು ನೀಡಿದರೂ ಎಫ್‍ಐಆರ್ ದಾಖಲು ಮಾಡುತ್ತಾ ಇಲ್ಲ ಅಂತ ಹೈಕೋರ್ಟ್ ಮೊರೆ ಹೋಗಿದ್ದರು. ಇದನ್ನು ಪರಿಶೀಲಿಸಿದ ನ್ಯಾಯಾಲಯ ಎಫ್‍ಐಆರ್ ದಾಖಲು ಮಾಡೋದಕ್ಕೆ ಸೂಚನೆ ನೀಡಿದೆ.

ನೊಂದವರು ಪೊಲೀಸರ ವಿರುದ್ಧ ದೂರನ್ನು ನೀಡಿದ್ದಾರೆ. 10 ದೂರುಗಳನ್ನು ನೀಡಿ ಪದೇ ಪದೇ ಆ ದೂರಿನ ಬಗ್ಗೆ ವಿಚಾರಣೆ ನಡೆಸಲು ಪೊಲೀಸ್ ಠಾಣೆಗೆ ಮತ್ತು ಮಂಗಳೂರು ಆಯುಕ್ತರ ಭೇಟಿಗೆ ತೆರಳಿದಾಗ ಸರಿಯಾದ ರೀತಿಯಲ್ಲಿ ಉತ್ತರ ನೀಡುತ್ತಾ ಇಲ್ಲ. ಈ ದೂರಿಗೆ ಕ್ರಮವನ್ನು ಪೊಲೀಸರು ಜರಗಿಸುತ್ತಿಲ್ಲ ಅಂತ ವಾದ ಮಾಡಿದ್ದರು. ಇದನ್ನ ಪರಿಶೀಲಿಸಿದ ನ್ಯಾಯಾಲಯ ಪೊಲೀಸರ ವಿರುದ್ಧ ಎಫ್‍ಐಆರ್ ದಾಖಲಿಗೆ ಸೂಚಿಸಿದೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

17 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

17 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

17 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

17 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

17 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

18 hours ago