Featured

ಮಂಗಳೂರು ಗಾಂಜಾ ಪ್ರಕರಣ : ಲಿವಿಂಗ್ ಟುಗೆದರ್ ಸೆಕ್ಸ್, ಮಾದಕ ನಶೆಯಲ್ಲಿ ತೇಲಾಡುವ ಮೆಡಿಕಲ್ ವಿದ್ಯಾರ್ಥಿಗಳ ಕರಾಳ ಲೋಕ ಬಯಲು – Vishwanews24

ಮಂಗಳೂರು ಗಾಂಜಾ ಪ್ರಕರಣ : ಲಿವಿಂಗ್ ಟುಗೆದರ್ ಸೆಕ್ಸ್, ಮಾದಕ ನಶೆಯಲ್ಲಿ ತೇಲಾಡುವ ಮೆಡಿಕಲ್ ವಿದ್ಯಾರ್ಥಿಗಳ ಕರಾಳ ಲೋಕ ಬಯಲು

ಮಂಗಳೂರು : ಮಂಗಳೂರಿನಲ್ಲಿ ಹೈಪ್ರೊಫೈಲ್ ಗಾಂಜಾ ದಂಧೆ ಪ್ರಕರಣ ನಡೆದಿದ್ದು, ವೈದ್ಯರು, ವಿದ್ಯಾರ್ಥಿಗಳು ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಹೊರಬಿದ್ದಿದ್ದು, ವಿದ್ಯಾರ್ಥಿನಿಯರು ಮಾದಕ ನಶೆಯ ಚಟಕ್ಕೆ ಬೀಳಲು ಮುಖ್ಯ ಕಾರಣ ಅವರು ಲಿವಿಂಗ್ ಟುಗೆದರ್ ಸಂಬಂಧವನ್ನು ಹೊಂದಿದ್ದರು ಎಂಬುದು ತಿಳಿದು ಬಂದಿದೆ.

ಇವರಲ್ಲಿ ಬೇರೆ ಬೇರೆ ರಾಜ್ಯಗಳಿಂದ ಬಂದವರಾಗಿದ್ದು, ಒಬ್ಬರನ್ನೊಬ್ಬರು ಪರಿಚಯ ಮಾಡಿಕೊಂಡು ಯುವಕ-ಯುವತಿಯರು ಲಿವಿಂಗ್ ಟುಗೆದರ್ ಎಂದು ಒಟ್ಟಿಗೆ ಇರುತ್ತಾರೆ. ಸೆಕ್ಸ್, ಮಾದಕ ನಶೆಯಲ್ಲಿ ತೇಲಾಡುತ್ತಾರೆ ಎಂಬ ಅಚ್ಚರಿ ಮಾಹಿತಿ ಬಯಲಾಗಿದೆ.

ಮಂಗಳೂರಿನ ಹಲವು ಅಪಾರ್ಟ್ ಮೆಂಟ್ ಗಳಲ್ಲಿ ಲಿವಿಂಗ್ ಟುಗೆದರ್ ಎಂಬ ಹೆಸರಿನಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಒಟ್ಟಾಗಿ ವಾಸ ಮಾಡುತ್ತಿದ್ದು, ಗಾಂಜಾ ನಶೆಯಲ್ಲಿ ತೇಲಾಡಿ..ತಮ್ಮ ಸ್ನೇಹಿತರನ್ನು ಕೂಡ ಇದಕ್ಕೆ ಸೆಳೆಯುತ್ತಿದ್ರು ಎಂಬ ವಿಚಾರ ತನಿಖೆ ವೇಳೆ ಹೊರಬಿದ್ದಿದೆ.

ದೇರಳಕಟ್ಟೆಯ ಯೆನೇಪೋಯಾ ಮೆಡಿಕಲ್ ಕಾಲೇಜು, ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ. ಅತ್ತಾವರ, ಕೆ.ಎಂ.ಸಿ ಮಣಿಪಾಲ ಕಾಲೇಜಿನ ವೈದ್ಯರು ಹಾಗೂ ವಿದ್ಯಾರ್ಥಿಗಳು ಈ ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ವೈದ್ಯರಾದ ಡಾ. ಸಮೀರ್(32), ಮಣಿಮಾರನ್ ಮುತ್ತು(28)ರನ್ನು ವಿದ್ಯಾರ್ಥಿನಿಯರಾದ ಡಾ. ನದಿಯಾ ಸಿರಾಜ್ (24), ಡಾ.ವರ್ಷಿಣಿ ಪ್ರತಿ (26), ಡಾ.ರಿಯಾ ಚಡ್ಡ (22), ಡಾ.ಹೀರಾ ಬಸಿನ್ (23) ಹಾಗೂ ವೈದ್ಯ ಡಾ.ಸಮೀರ್ (32), ಮಣಿಮಾರನ್ ಮುತ್ತು (28), ಸ್ಥಳೀಯ ಮಹಮ್ಮದ್ ರವೂಪ್ ಅಲಿಯಾಸ್ ಗೌಸ್ (34) ಬಂಧಿಸಲಾಗಿದೆ. ವಿದ್ಯಾರ್ಥಿಗಳಾದ ಡಾ. ಭಾನು ದಹಿಯಾ (27), ಡಾ.ಕ್ಷಿತಿಜ್ ಗುಪ್ತ (23) ಇವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇತ್ತೀಚೆಗೆ ಯು.ಕೆ ಮೂಲದ ಗಾಂಜಾ ಪೆಡ್ಲರ್ ನೀಲ್ ಕಿಶೋರಿಲಾಲ್ ರಾಮ್ ಜೀ ಎಂಬಾತನನ್ನುಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಈ ಸ್ಪೋಟಕ ಸತ್ಯ ಬಯಲಾಗಿದೆ. ಬಂಧಿತರಿಂದ 2 ಕೆ.ಜಿ ಗಾಂಜಾ, ಒಂದು ನಕಲಿ ಪಿಸ್ತೂಲ್, ಡ್ರಾಗರ್ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳನ್ನೇ ಟಾರ್ಗೆಟ್ ಮಾಡಿಕೊಂಡು ವಿದ್ಯಾರ್ಥಿಗಳು ಮತ್ತು ವೈದ್ಯರನ್ನೇ ಟಾರ್ಗೆಟ್ ಮಾಡಿಕೊಂಡಿದ್ದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

18 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

19 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

20 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

20 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

20 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

20 hours ago