ಮಂಗಳೂರು : ಅಕ್ಟೋಬರ್ 2 ರಂದು ನಡೆಯುವ ಗಾಂಧಿ ಜಯಂತಿ ಕಾರ್ಯಕ್ರಮಕ್ಕಾಗಿ ಕಾಂಗ್ರೇಸ್ ಪಾಳಯದಲ್ಲಿ ಸಿದ್ದತೆ ಜೋರಾಗಿ ನಡೆಯುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೂಡ ಸಿದ್ದತೆ ನಡೆದಿದ್ದು, ಕಾಂಗ್ರೇಸ್ ನ ಕಾರ್ಯಕರ್ತರ ಸಿದ್ದತೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗಾಂಧಿ ಜಯಂತಿ ಹಿನ್ನಲೆಯಲ್ಲಿ ಅಕ್ಟೋಬರ್ 2 ರಂದು ಮಂಗಳೂರಿಗೆ ಗಾಂಧಿ ನಡಿಗೆ ಕಾರ್ಯಕ್ರಮವನ್ನು ಕಾಂಗ್ರೇಸ್ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ದತೆ ನಡೆಯುತ್ತಿದ್ದು, ನಡಿಗೆ ಕಾರ್ಯಕ್ರಮದಲ್ಲಿ ಮಾರ್ಚ್ ಪಾಸ್ಟ್ ಗೆ ಲಾಠಿ ಹಿಡಿದು ಕಾಂಗ್ರೇಸ್ ಕಾರ್ಯಕರ್ತರು ಸಿದ್ಧತೆ ನಡೆಸುತ್ತಿದ್ದಾರೆ.
ಮಾಜಿ ಸಚಿವ ಯು.ಟಿ ಖಾದರ್ ಅವರ ನೇತೃತ್ವದಲ್ಲಿ ಈ ಸಿದ್ದತೆ ನಡೆಯುತ್ತಿದ್ದು, ಆರ್ ಎಸ್ ಎಸ್ ನ ರೀತಿಯಲ್ಲೇ ಕಾಂಗ್ರೇಸ್ ಕಾರ್ಯಕರ್ತರಿಗೆ ಲಾಠಿ ನೀಡಿ ಮಾರ್ಚ್ ಫಾಸ್ಟ್ ನ ಟ್ರೈನಿಂಗ್ ನ್ನು ಮಾಜಿ ಸಚಿವ ಯು.ಟಿ.ಖಾದರ್ ನೀಡುತ್ತಿದ್ದಾರೆ. ಈ ಮಾರ್ಚ್ ಫಾಸ್ಟ್ ನಲ್ಲಿ ಟ್ರೈನಿಂಗ್ ನಲ್ಲಿ ಕಾಂಗ್ರೇಸ್ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದು, ಆರ್.ಎಸ್.ಎಸ್ ನಂತೆ ಲಾಠಿ ಹಿಡಿದು ತಾಲೀಮು ನಡೆಸುತ್ತಿದ್ದಾರೆ.
ಈ ಕಾರ್ಯಕ್ರಮದ ಪೂರ್ವ ಸಿದ್ಧತೆ ಕಾರ್ಯಕರ್ತರು ಪಥಸಂಚಲನ ತರಬೇತಿ ಮಾಡುತ್ತಿದ್ದಾರೆ. ವಿಶೇಷವೆಂದರೆ ಕಾಂಗ್ರೆಸ್ ಸೇವಾದಳದ ಸ್ವಯಂಸೇವಕರು ದಂಡವನ್ನು ಹಿಡಿದು ಪಥಸಂಚಲನ ನಡೆಸುತ್ತಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…