ಮಂಗಳೂರು: ನಗರದಲ್ಲಿ ಗಿಳಿಗಳ ಮೂಲಕ ಶಾಸ್ತ್ರ ಹೇಳುತ್ತಿದ್ದ ಐವರನ್ನು ವಶಕ್ಕೆ ಪಡೆದುಕೊಂಡಿರುವ ಮಂಗಳೂರಿನ ಅರಣ್ಯಾಧಿಕಾರಿಗಳು ಆರೋಪಿಗಳಿಂದ ಐದು ಗಿಳಿ ಪೆಟ್ಟಿಗೆಗಳನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳೂರಿನ ಕದ್ರಿ ದೇವಸ್ಥಾನ ಸಮೀಪ ಶಾಸ್ತ್ರ ಹೇಳುವವರು ಕಾಯ್ದೆಗೆ ವಿರುದ್ಧವಾಗಿ ಗಿಳಿಗಳನ್ನು ಬಳಕೆ ಮಾಡುತ್ತಿರುವ ಬಗ್ಗೆ ಸಿಕ್ಕ ಮಾಹಿತಿ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಐವರು ಆರೋಪಿಗಳನ್ನು ಹಾಗೂ ಐದು ಗಿಳಿ ಪೆಟ್ಟಿಗೆಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ಯಶವಂತಪುರ ನಿವಾಸಿ ಬಸವರಾಜ್, ಪಿಲ್ಲಹಳ್ಳಿ ನಿವಾಸಿಗಳಾದ ರಾಘವೇಂದ್ರ, ದುರ್ಗೇಶ್ ನಾಯ್ಕರ್, ಗೊರಗುಂಟೆಪಾಳ್ಯ ನಿವಾಸಿ ಅಶೋಕ್ ಬೋರ, ಪಿಲ್ಲಹಳ್ಳಿ ನಿವಾಸಿ ಅಣ್ಣಪ್ಪ ಆರ್. ಅವರನ್ನು ವಶಕ್ಕೆ ಪಡೆಯಲಾಗಿದೆ.
ಮಾ.13ರಂದು “ಯಕ್ಷ ಪ್ರೀಯರು” ಕಾಪು ಇದರ ಉದ್ಘಾಟನೆ ಹಾಗೂ ಯಕ್ಷಗಾನ ಪ್ರದರ್ಶನ -Vishwanews24
ಆರೋಪಿಗಳು ಶಾಸ್ತ್ರ ಹೇಳಲು ಅರಣ್ಯದ ಗಿಳಿಗಳನ್ನು ಹಿಡಿದು ಅವುಗಳು ಹಾರಿಹೋಗದಂತೆ ರೆಕ್ಕೆಯ ಗರಿಗಳು ಮತ್ತು ಮೂತಿ ಕತ್ತರಿಸಿ, ಶಾಸ್ತ್ರ ಹೇಳುವ ಸಂದರ್ಭ ಕಾರ್ಡ್ ತೆಗೆಯುವ ಕೆಲಸಕ್ಕೆ ಬಳಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಪ್ರಕಾರ ಈ ರೀತಿ ಹಕ್ಕಿಗಳನ್ನು ಬಳಕೆ ಮಾಡುವುದು ಅಪರಾಧವಾಗಿದೆ. ಕದ್ರಿ ದೇವಸ್ಥಾನದ ಬಳಿ ಗಿಳಿಗಳು ಕಂಡು ಬಂದಿದ್ದು, ಕೂಡಲೇ ಎನ್‌ಇಸಿಎಸ್ ಕಾರ್ಯಕರ್ತರೊಬ್ಬರು ಅರಣ್ಯ ಇಲಾಖೆ ಅಧಿಕಾರಿ ಶ್ರೀಧರ್ ಅವರಿಗೆ ಮಾಹಿತಿ ನೀಡಿದ್ದು, ಅವರ ಸಿಬ್ಬಂದಿ ಮೂಲಕ ಸ್ಥಳಕ್ಕೆ ತೆರಳಿ ಗಿಳಿ ಪೆಟ್ಟಿಗೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಈ ಬಗ್ಗೆ ಮುಂದಿನ ವಿಚಾರಣೆ ಕೈಗೊಂಡಿದ್ದಾರೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…