ಮಂಗಳೂರು : “ಡಿ.9ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದಿದ್ದ ಹಿಂಸಾಚಾರದ ಪ್ರತಿಭಟನೆಯಲ್ಲಿ ಪೊಲೀಸ್ ಗುಂಡೇಟಿಗೆ ಬಲಿಯಾದ ಮೃತರಿಬ್ಬರು ಅಪರಾಧಿಗಳು ಎಂದು ಆದರೆ ಒಂದು ರೂಪಾಯಿಯು ಪರಿಹಾರ ಕೊಡುವುದಿಲ್ಲ” ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಅಪರಾಧ ಸಾಬೀತಾದರೆ, ಒಂದು ರೂಪಾಯಿಯು ಕೊಡಲ್ಲ. ಈ ಕುರಿತು ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇವೆ. ಮೃತ ಪಟ್ಟವರಿಗೆ ಪರಿಹಾರ ಘೋಷಣೆ ಮಾಡಿಲ್ಲ” ಎಂದು ತಿಳಿಸಿದ್ದಾರೆ.
ಮಂಗಳವಾರ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಕೆಲವೊಂದು ವಿಡಿಯೋಗಳನ್ನು ಬಿಡುಗಡೆ ಮಾಡಿದ್ದರು. ವಿಡಿಯೋದಲ್ಲಿ ಕಿಡಿಗೇಡಿಗಳು ಪೊಲೀಸರ ಮೇಲೆ ಕಲ್ಲುತೂರಾಟ ನಡೆಸುತ್ತಿರುವುದು ಬಹಿರಂಗಗೊಂಡಿತ್ತು. ಅಲ್ಲದೆ ಕೆಲವೆಡೆ ಸಿಸಿ ಕ್ಯಾಮರಾಗಳನ್ನು ಧ್ವಂಸ ಮಾಡುವುದು ಸೆರೆಯಾಗಿತ್ತು.
ಇದರ ಬೆನ್ನಲ್ಲೇ ಮಂಗಳೂರಿನಲ್ಲಿ ಅಧಿಕಾರಿಗಳ ಹಾಗೂ ಶಾಸಕರ ಜೊತೆ ಸಭೆ ನಡೆಸಿದ ಸಿಎಂ ಬಿಎಸ್‌ವೈ ಮೃತರ ಕುಟುಂಬಕ್ಕೆ ನೀಡಬೇಕಾದ ಪರಿಹಾರ ಮೊತ್ತವನ್ನು ತಡೆ ಹಿಡಿದಿದ್ದಾರೆ. ಮೃತಪಟ್ಟ ಯುವಕರು ಗಲಭೆಯಲ್ಲಿ ಭಾಗಿಯಾಗಿದ್ದಾರಾ ಎಂಬ ಕುರಿತಾಗಿ ತನಿಖೆ ನಡೆಸಿದ ಬಳಿಕ ಪರಿಹಾರ ನೀಡಲು ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.
ಒಂದು ವೇಳೆ ಮೃತಪಟ್ಟವರು ಅಪರಾಧಿಗಳು ಎಂದು ರುಜುವಾತಾದರೆ ಪರಿಹಾರ ನೀಡಿದ್ದು ತಪ್ಪಾಗುತ್ತದೆ. ಈ ಕಾರಣದಿಂದಾಗಿ ನೀಡಲಾಗಿದ್ದ ಪರಿಹಾರವನ್ನು ತಡೆಹಿಡಿಯಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…