ಮಂಗಳೂರು, : ರಾಜ್ಯ ಕರಾವಳಿ ಭಾಗದಲ್ಲಿ ಇಂದು ಗುಡುಗು ಸಿಡಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಶನಿವಾರದಿಂದ ಮುಂದಿನ ನಾಲ್ಕು ದಿನಗಳ ಕಾಲ ದ.ಕ ಜಿಲ್ಲೆಯಲ್ಲಿ ಹವಾಮಾನ ಇಲಾಖೆಯೂ ಆರೆಂಜ್ ಅಲರ್ಟ್ ಘೋಷಿಸಿದೆ. ಜೂನ್ 12ರಂದು ಬೆಳಗ್ಗೆ 8.30ರಿಂದ ಜೂನ್ 16ರಂದು ಬೆಳಗ್ಗೆ 8.30ರವರೆಗೆ ’ಆರೆಂಜ್ ಅಲರ್ಟ್’ ಇರಲಿದೆ.
ದಕ್ಷಿಣ ಕನ್ನಡ ಮಾತ್ರವಲ್ಲದೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಇಂದು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಹೇಳಿದೆ . ಅಲ್ಲದೆ ಬೆಳಗ್ಗಿನ ವೇಳೆಯಲ್ಲಿ ಸಿಡಿಲು ಗುಡುಗು ಸಹಿತ ಉತ್ತಮ ಮಳೆಯಾಗಲಿದೆ ಎಂದು ಇಲಾಖೆ ಸೂಚನೆ ನೀಡಿದೆ.
ದ.ಕ ಜಿಲ್ಲೆಯಲ್ಲಿ ಸುಮಾರು 115.6 ಮಿ.ಮೀ.ನಿಂದ 204.4 ಮಿ.ಮೀ.ವರೆಗೆ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಇನ್ನು ಶುಕ್ರವಾರ ದ.ಕ ಜಿಲ್ಲೆಯ ಬೆಳ್ತಂಗಡಿಯಲ್ಲಿ 19.9 ಮಿ.ಮೀ., ಬಂಟ್ವಾಳ 35.6, ಮಂಗಳೂರು 30.9, ಪುತ್ತೂರು 36.3, ಸುಳ್ಯ 25.5, ಮೂಡುಬಿದಿರೆ 19.1, ಕಡಬದಲ್ಲಿ 23.5 ಮಿ.ಮೀ. ಸಹಿತ ಸರಾಸರಿ 27.2 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ ಉಡುಪಿ: ಮಣಿಪಾಲ್ ಬಳಿಯ ಕೊಡಂಗೆಯಲ್ಲಿ ಶಾಲಾ…
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…