Featured

ಮಂಗಳೂರು : ಗುಡ್ಡ ಕುಸಿತ ಪ್ರಕರಣ- ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಸಾವು – vishwanews24

ಮಂಗಳೂರು : ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಸಾವು

ಉಳ್ಳಾಲ : ಉಳ್ಳಾಲದಲ್ಲಿ ಸುರಿದ ಭಾರೀ ಮಳೆಗೆ ಗುಡ್ಡ ಮನೆಯ ಮೇಲೆ ಕುಸಿದ ಪರಿಣಾಮ ಮೂವರು ಸಾವನಪ್ಪಿದ್ದಾರೆ. ಮಣ್ಣಿನಡಿ ಅವಶೇಷಗಳಲ್ಲಿ ಸಿಲುಕಿದ್ದ ಇಬ್ಬರು ಪುಟಾಣಿ ಮಕ್ಕಳನ್ನು ಹೊರತೆಗೆಯಲಾಗಿದ್ದು, ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದ ಹಿತ್ತಿಲು ಕೋಡಿ ಕೊಪ್ಪಲ ಎಂಬಲ್ಲಿ ಧಾರಕಾರ ಮಳೆಗೆ ಗುಡ್ಡವೊಂದು ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಸಾವನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮಂಜನಾಡಿ ಗ್ರಾಮದ ಉರುಮನೆ ಮದಪಾಡಿಯಲ್ಲಿ ಶುಕ್ರವಾರ (ಮೇ 30) ಮುಂಜಾನೆ ಮನೆಯ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದ ಬಿದ್ದಿತ್ತು. ತೋಟದ ನಡುವಿರುವ ಮನೆಯ ಮೇಲೆ ಬೃಹತ್‌ ಮರ ಸಹಿತ ಸುಮಾರು 30 ಅಡಿ ಧರೆ ಕುಸಿದು ಬಿದ್ದಿತ್ತು. ಶುಕ್ರವಾರ ಮುಂಜಾನೆ ಸುಮಾರು 4 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ.

ಘಟನೆ ನಡೆದ ವೇಳೆ ಮನೆ ಯಜಮಾನ ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮಾ, ಪುತ್ರ ಸೀತಾರಾಮ ಮತ್ತು ಅವರ ಪತ್ನಿ ಅಶ್ವಿನಿ ಮಕ್ಕಳಾದ ಆರುಷ್‌, ಆರ್ಯನ್‌ ಮಲಗಿದ್ದರು. ಸೀತಾರಾಮ ಅವರು ಮನೆಯಿಂದ ಹೊರಬರಲು ಯಶಸ್ವಿಯಾಗಿದ್ದಾರೆ. ಪ್ರೇಮಾ ಅವರು ಸ್ಥಳದಲ್ಲೇ ಅಸುನೀಗಿದ್ದಾರೆ. ಅವರ ಮೃತದೇಹವೂ ಮಣ್ಣಿನಡಿಯಲ್ಲೇ ಇದೆ. ಕಾಂತಪ್ಪ ಪೂಜಾರಿ ಅವರನ್ನು ರಕ್ಷಿಸಲಾಗಿದ್ದು, ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ನಡೆದ ಕಾರ್ಯಾಚರಣೆಯಲ್ಲಿ ಅಶ್ವಿನಿ ಅವರನ್ನು ರಕ್ಷಣೆ ಮಾಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ.

ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ (54 ವ) ಮಕ್ಕಳಾದ ಮೂರು ವರ್ಷದ ಮಗು ಆರ್ಯನ್‌‌, ಎರಡು ವರ್ಷ ಪ್ರಾಯದ ಆರುಷ್ (2 ವರ್ಷ) ಮೃತಪಟ್ಟಿದ್ದಾರೆ. ಆರುಷ್‌ ನನ್ನು ಮಣ್ಣಿನಡಿಯಿಂದ ತೆಗೆದು ರಕ್ಷಣೆ ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಅಸುನೀಗಿದೆ. ಎನ್‌ ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ತಂಡಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಪ್ರೇಮ ಅವರ ಮೃತದೇಹವನ್ನು ಹುಡುಕಲಾಗುತ್ತಿದ್ದು, ಕಾರ್ಯಾಚರಣೆ ಮುಂದುವರಿದಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

15 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago