ಮಂಗಳೂರು: ನಗರದ ಹೊರವಲಯದ ಗುರುಪುರ ಕೈಕಂಬ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.
ವಿರುದ್ಧ ದಿಕ್ಕಿನಿಂದ ಬಂದ ಲಾರಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಬಸ್ ಚಾಲಕನ ಕಾಲು ಮುರಿದಿದೆ ಎಂದು ತಿಳಿದುಬಂದಿದೆ. ಬಸ್ನಲ್ಲಿದ್ದ ಪ್ರಯಾಣಿಕರಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ.
ಅಪಘಾತದ ಪರಿಣಾಮವಾಗಿ ಕೆಲವು ಸಮಯ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ವಾಹನಗಳ ಸಂಚಾರದಲ್ಲಿ ತೀವ್ರ ಅಡಚಣೆ ಉಂಟಾಯಿತು. ಸ್ಥಳಕ್ಕೆ ಬಜ್ಪೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಚಾರವನ್ನು ಸುಧಾರಿಸಲು ಕ್ರಮ ಕೈಗೊಂಡಿದ್ದಾರೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…