ಮಂಗಳೂರು: ವಿಧಾನಸಭೆ ಚುನಾವಣೆ ಹಿನ್ನಲೆ ಜಿಲ್ಲೆಯಲ್ಲಿ ಅಪರಾಧ ಪ್ರವೃತ್ತಿಯುಳ್ಳ 11 ಮಂದಿಯನ್ನು 6 ತಿಂಗಳ ಕಾಲ ಗಡಿಪಾರು ಮಾಡಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದ.ಕ.ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ಜಿಲ್ಲಾಧಿಕಾರಿ ಅವರು ವಿಚಾರಣೆ ಕೈಗೊಂಡಿದ್ದರು.
ಅದರಂತೆ ಅಪರಾಧ ಪ್ರವೃತ್ತಿವುಳ್ಳ, ಸಮಾಜದ ಸ್ವಾಸ್ಥ್ಯಕ್ಕೆ ಗಂಡಾಂತರಕಾರಿಯಾದ ದ.ಕ.ಜಿಲ್ಲೆಯ 11 ಜನರನ್ನು ದ.ಕ.ಜಿಲ್ಲೆಯಿಂದ ಮಾರ್ಚ್ 6 ರಿಂದ ಸೆಪ್ಟೆಂಬರ್ 6 ರ ವರೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಳ್ತಮಜಲು ನಿವಾಸಿ ನಜೀರ್ ಕುಣಿಗಲ್, ಬಾಳ್ತಿಲ ನಿವಾಸಿ ಇಬ್ರಾಹಿಂ ಖಲೀಲ್,ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಜಯರಾಜ್ ರೈ,ಇಬ್ರಾಹಿಂ, ಹಕೀಂ ಕೂರ್ನಡ್ಕ, ಬೆಳ್ಳಾರೆ ಪೋಲೀಸ್ ಠಾಣಾ ವ್ಯಾಪ್ತಿಯ ರೋಷನ್, ಪ್ರಸಾದ್, ಉಪ್ಪಿನಂಗಡಿ ಪೋಲೀಸ್ ಠಾಣಾ ವ್ಯಾಪ್ತಿಯ ಅಬೂಬಕ್ಕರ್, ಉಬೈದ್ ಬಿಎಸ್. ತಸ್ಲೀಂ, ಧರ್ಮಸ್ಥಳ ಪೋಲೀಸ್ ಠಾಣಾ ವ್ಯಾಪ್ತಿಯ ಕಿರಣ್ ಕುಮಾರ್ ಅವರನ್ನು ಗಡಿಪಾರು ಮಾಡಿ ಎಂದು ಆದೇಶ ಮಾಡಿದ್ದಾರೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …