Featured

ಮಂಗಳೂರು ಗೋಡೆ ಬರಹ : ಕಾಂಗ್ರೆಸ್ ಸರ್ಕಾರ ಇದ್ದಾಗ ಇರಲಿಲ್ಲ. ಆದ್ರೆ ಬಿಜೆಪಿ ಬಂದಾಗ ಸಮಾಜ ದ್ರೋಹಿ ಶಕ್ತಿಗಳಿಗೆ ಧೈರ್ಯ ಬರುತ್ತೆ : ಯುಟಿ ಖಾದರ್ -Vishwanews24

ಮಂಗಳೂರು ಗೋಡೆ ಬರಹ : ಕಾಂಗ್ರೆಸ್ ಸರ್ಕಾರ ಇದ್ದಾಗ ಇರಲಿಲ್ಲ. ಆದ್ರೆ ಬಿಜೆಪಿ ಬಂದಾಗ ಸಮಾಜ ದ್ರೋಹಿ ಶಕ್ತಿಗಳಿಗೆ ಧೈರ್ಯ ಬರುತ್ತೆ : ಯುಟಿ ಖಾದರ್ -Vishwanews24

ದಕ್ಷಿಣ ಕನ್ನಡ: ಮಂಗಳೂರು ನಗರದಲ್ಲಿ ಗೋಡೆ ಬರಹ ಬರೆಯುವುದನ್ನ ತೀವ್ರವಾಗಿ ಖಂಡಿಸುತ್ತೇವೆ ಇದನ್ನ ಮಾಡಿರುವುದು ಯಾರೇ ಆದರೂ, ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿಕೆ ನೀಡಿದ್ದಾರೆ.

ಈ ಕುರಿತು ಭಾನುವವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿವಾದಾತ್ಮಕ ಗೋಡೆ ಬರಹಗಳನ್ನು ಬರೆದಿರುವವರನ್ನು ಪತ್ತೆ ಹಚ್ಚುವ ಜವಬ್ದಾರಿ ಬಿಜೆಪಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಮೆಲಿದೆ. ಜೊತೆಗೆ ಈ ಗೋಡೆಬರಹ ಬರೆದವರಿಗೆ ಬೆಂಬಲವಾಗಿರುವರನ್ನು ಕೂಡ ಪತ್ತೆ ಹಚ್ಚಿ ಷಡ್ಯಂತ್ರ ಬಯಲು ಮಾಡಬೇಕಿದೆ ಎಂದು ಯುಟಿ ಖಾದರ್ ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ಇಂತಹ ಕೃತ್ಯಗಳು ನಡೆಯುತ್ತಿರುವಾಗ ಗುಪ್ತಚರ ಇಲಾಖೆ ಏನು ಮಾಡ್ತಿದೆ..? ಎಂದು ಗಂಭೀರವಾಗಿ ಪ್ರಶ್ನೆ ಮಾಡಿರುವ ಶಾಸಕ ಖಾದರ್, ಜಿಲ್ಲೆಯಲ್ಲಿ ಇವತ್ತು ಕಾನೂನಿಗೆ ಹೆದರದ ಪರಿಸ್ಥಿತಿ ನಿರ್ಮಾಣವಾಗಿದ್ದು ಗೋಡೆ ಬರಹ, ಇನ್ನಿತರ ವಿಚಾರಗಳು ಕಾಂಗ್ರೆಸ್ ಸರ್ಕಾರ ಇದ್ದಾಗ ಇರಲಿಲ್ಲ. ಆದ್ರೆ ಬಿಜೆಪಿ ಬಂದಾಗ ಸಮಾಜ ದ್ರೋಹಿ ಶಕ್ತಿಗಳಿಗೆ ಧೈರ್ಯ ಬರುತ್ತೆ..?ಇದಕ್ಕೆ ಜಿಲ್ಲೆಯ ಎಂಪಿ, ಎಂ.ಎಲ್.ಎ.ಗಳು ಉತ್ತರ ಕೊಡಬೇಕು ಎಂದು ಆಗ್ರಹಿಸಿದ ಖಾದರ್, ಮಂಗಳೂರಿನಲ್ಲಿ ಒಂದು ಬಾರಿಯಲ್ಲದೆ ಮತ್ತೆ ಮತ್ತೆ ಹೀಗ್ಯಾಕೆ ಗೋಡೆ ಬರಹಗಳನ್ನು ಬರೆಯಲಾಗುತ್ತಿದೆ.. ಗೋಡೆ ಬರಹಗಳನ್ನು ಬರೆದವರನ್ನ ಪತ್ತೆ ಹಚ್ಚಿ ಅಂಥವರನ್ನ ಬೇರೆ ದೇಶಕ್ಕೆ ಬಿಟ್ಟು ಬರಬೇಕು. ಅಂಥವರಿಗೆ ನಮ್ಮ ಮಣ್ಣಿನಲ್ಲಿ ಇರಲು ಯಾವುದೇ ಹಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇನ್ನು, ಈ ವಿಚಾರದ ಬಗ್ಗೆ ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ ಎಂದ ಖಾದರ್, ಒಂದು ವಾರದ ಒಳಗೆ ಈ ಆರೋಪಿಗಳ ಪತ್ತೆಯಾಗಬೇಕು.ಅದು ಬಿಟ್ಟು 15 ದಿನದ ಒಳಗೆ ಬಂಧನ ಆಗದೇ ಇದ್ರೆ..! ಜಿಲ್ಲೆಯಾದ್ಯಂತ ಉಗ್ರ ಹೋರಾಟ ಮಾಡ್ತೇವೆ. ಅವರು ಮಾನಸಿಕ ಅಸ್ವಸ್ಥರೇ ಆಗಿರಲಿ, ಅವರನ್ನು ಬಂಧಿಸತಕ್ಕದ್ದು ಇವತ್ತು ಕೋಮಾ ಸ್ಥಿತಿಯಲ್ಲಿ ಇರುವ ರಾಜ್ಯ ಸರ್ಕಾರ ಜವಾಬ್ದಾರಿ ಎಂಬ ಕಿಡಿನುಡಿಗಳನ್ನು ಖಾದರ್ ನುಡಿದಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

17 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

19 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

19 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

19 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

20 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

20 hours ago