Featured

ಮಂಗಳೂರು ಗೋಡೆ ಮೇಲೆ ಉಗ್ರ ಸಂಘಟನೆ ಪರ  ಬರಹ –  ದುಷ್ಕರ್ಮಿಗಳನ್ನು ತಕ್ಷಣ ಪತ್ತೆ ಹಚ್ಚಿ, ದೇಶದ್ರೋಹದ ಪ್ರಕರಣ ದಾಖಲಿಸಿ ದೇಶದಿಂದ ಹೊರಗಟ್ಟಿ : ಐವನ್ ಡಿಸೋಜಾ -Vishwanews24

ಮಂಗಳೂರು ಗೋಡೆ ಮೇಲೆ ಉಗ್ರ ಸಂಘಟನೆ ಪರ  ಬರಹ –  ದುಷ್ಕರ್ಮಿಗಳನ್ನು ತಕ್ಷಣ ಪತ್ತೆ ಹಚ್ಚಿ, ದೇಶದ್ರೋಹದ ಪ್ರಕರಣ ದಾಖಲಿಸಿ ದೇಶದಿಂದ ಹೊರಗಟ್ಟಿ : ಐವನ್ ಡಿಸೋಜಾ -Vishwanews24

ಮಂಗಳೂರು: ಬಿಜೈ ಸಮೀಪದ ಅಪಾರ್ಟ್ಮೆಂಟ್‌ವೊ0ದರ ಗೋಡೆ ಮೇಲೆ ಉಗ್ರ ಸಂಘಟನೆಯ ಪರ ಬರಹವನ್ನು ಖಂಡಿಸಿ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಲಾಯಿತು. ಯುವ ಇಂಟಕ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ, ಪ್ರತಿಭಟನಾಕಾರರು ಜಿಲ್ಲೆಯಲ್ಲಿ ಶಾಂತಿ ಕದಡುವ ದುಷ್ಕರ್ಮಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಈ ವೇಳೆ ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜಾ ಮಾತನಾಡಿ, ಮಂಗಳೂರು ಬಿಜೈ ಸಮೀಪದ ಅಪಾರ್ಟ್ಮೆಂಟ್‌ವೊ0ದರ ಗೋಡೆ ಮೇಲೆ ಉಗ್ರ ಸಂಘಟನೆಯ ಪರ ಬರಹ ಬರೆದಿರುವ ದುಷ್ಕರ್ಮಿಗಳನ್ನು ತಕ್ಷಣ ಪತ್ತೆ ಹಚ್ಚಿ, ದೇಶದ್ರೋಹದ ಪ್ರಕರಣ ದಾಖಲಿಸಿ ದೇಶದಿಂದ ಹೊರಗಟ್ಟಬೇಕು.

ಇದು ದೇಶದ ಭದ್ರತೆಗೆ ಸವಾಲಿನ ಪ್ರಕರಣವಾಗಿದ್ದು, ಈ ರೀತಿ ಜಿಲ್ಲೆಯಲ್ಲಿ ಶಾಂತಿ ಕದಡುತ್ತಿರುವ ದುಷ್ಟಶಕ್ತಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕಾಗಿದೆ. ನಗರದ ಹೃದಯ ಭಾಗದಲ್ಲಿ ಇಷ್ಟೊಂದು ಧೈರ್ಯದಲ್ಲಿ ಈ ಕೃತ್ಯ ನಡೆದಿರುವುದು ಜಿಲ್ಲೆಯ ಪೊಲೀಸ್ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಆದ್ದರಿಂದ ಪೊಲೀಸರು ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ ನಗರದಲ್ಲಿ ಮೆರವಣಿಗೆ ನಡೆಸಬೇಕು.

ಅಲ್ಲದೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭ ಪ್ರತಿಭಟನೆಯಲ್ಲಿ ನ್ಯಾಯವಾದಿ ದಿನಕರ ಶೆಟ್ಟಿ, ಇಂಟಕ್ ಮುಖಂಡರಾದ ಮನೋಹರ್ ಶೆಟ್ಟಿ, ಚಿತ್ತರಂಜನ್ ಶೆಟ್ಟಿ, ಸುನೀಲ್ ಶೆಟ್ಟಿ, ಹರೀಶ್, ಪುನೀತ್ ಮೊದಲಾದವರು ಭಾಗವಹಿಸಿದ್ದರು.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

18 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

19 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

19 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

21 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

22 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

22 hours ago