Featured

ಮಂಗಳೂರು : ಗೋಮಾಂಸ ಸಾಗಾಟದ ವೇಳೆ ಹಲ್ಲೆ ಪ್ರಕರಣ ; ಆರೋಪಿಗಳ ವಿರುದ್ದ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು : ಗೋಮಾಂಸ ಸಾಗಾಟದ ವೇಳೆ ಹಲ್ಲೆ ಪ್ರಕರಣ ; ಆರೋಪಿಗಳ ವಿರುದ್ದ ಪೋಕ್ಸೋ ಪ್ರಕರಣ ದಾಖಲು

ಮಂಗಳೂರು : ಬಜ್ಪೆ ಬಳಿ ಬೈಕ್ ನಲ್ಲಿ ಗೋಮಾಂಸಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಅಡ್ಡಗಟ್ಟಿ ಹಲ್ಲೆ ನಡೆಸಿದ ಆರೋಪಿದ ಮೇಲೆ ಅರೆಸ್ಟ್ ಆಗಿರುವ ಆರೋಪಿಗಳಿಬ್ಬರ ವಿರುದ್ಧ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿಯೂ ಬಜಪೆ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಹಲ್ಲೆಗೊಳಗಾದ ಬಳಿಕ ತಲೆಮರೆಸಿಕೊಂಡಿದ್ದ ಮೂಲರಪಟ್ಣದ ಅಬ್ದುಲ್ ಸತ್ತಾರ್‌ ಎಂಬಾತನನ್ನು ದಾಖಲೆಗಳಿಲ್ಲದೇ ಗೋಮಾಂಸ ಸಾಗಿಸಿದ ಆರೋಪದ ಮೇಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಡಪದವಿನ ಸುಮಿತ್ ಭಂಡಾರಿ (21), ರಜತ್ ನಾಯ್ಕ್‌ (30) ಹಲ್ಲೆ ನಡೆಸಿದ ಆರೋಪಿಗಳು. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಬೈಕನ್ನು ಟಾಟಾ ಸುಮೊ ವಾಹನದಲ್ಲಿ ಹಿಂಬಾಲಿಸಿದ್ದ ಆರೋಪಿಗಳು ನಾರ್ಲಪದವು ಬಳಿ ವಾಹನವನ್ನು ರಸ್ತೆಗೆ ಅಡ್ಡ ನಿಲ್ಲಿಸಿ, ತಂದೆ ಮೇಲೆ ಹಲ್ಲೆ ನಡೆಸಿದ್ದಾರೆ. ಅವರು ನನ್ನ ಬಟ್ಟೆಯನ್ನು ಜಗ್ಗಿ ಕಿರುಕುಳ ನೀಡಿದ್ದಾರೆ ಎಂದು ಬಾಲಕಿ ಹೇಳಿಕೆ ನೀಡಿದ್ದಾಳೆ. ಅದರ ಆಧಾರದಲ್ಲಿ ಆರೋಪಿಗಳಾದ ಸುಮಿತ್ ಭಂಡಾರಿ ಹಾಗೂ ರಜತ್ ನಾಯ್ಕ್ ವಿರುದ್ಧ ಪೊಕ್ಸೊ ಕಾಯ್ದೆಯ ಸೆಕ್ಷನ್ 12 (ಲೈಂಗಿಕ ಕಿರುಕುಳ), ಭಾರತೀಯ ನ್ಯಾಯಾಂಗ ಸಂಹಿತೆಯ ಸೆಕ್ಷನ್ 126 (2) (ತಡೆದು ನಿಲ್ಲಿಸಿದ್ದು), ಸೆಕ್ಷನ್‌ 115 (2) (ಹಲ್ಲೆ ನಡೆಸಿದ್ದು), ಸೆಕ್ಷನ್ 74 (ಬಾಲಕಿ ಮೇಲೆ ಹಲ್ಲೆ, ಮಾನಭಂಗ ಯತ್ನ), ಸೆಕ್ಷನ್ 75 (1) (ಲೈಂಗಿಕ ಕಿರುಕುಳ), ಸೆಕ್ಷನ್ 351 (ಕ್ರಿಮಿನಲ್ ಬೆದರಿಕೆ) ಹಾಗೂ ಸೆಕ್ಷನ್ 352 (ಶಾಂತಿ ಭಂಗ) ಅಡಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಬ್ದುಲ್ ಸತ್ತಾರ್‌ ಬೈಕಿನಲ್ಲಿ 35 ಪೊಟ್ಟಣಗಳಲ್ಲಿ ತುಂಬಿದ್ದ 19 ಕೆ.ಜಿ. ಗೋಮಾಂಸ ಪತ್ತೆಯಾಗಿದೆ. ಅದಕ್ಕೆ ಸಂಬಂಧಪಟ್ಟಂತೆ ಆರೋಪಿ ಯಾವುದೇ ಬಿಲ್‌ ಅಥವಾ ದಾಖಲೆಗಳನ್ನು ಒದಗಿಸಿಲ್ಲ. ಅದನ್ನು ಆತ ಎಲ್ಲಿಂದ ತಂದಿದ್ದ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

7 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

7 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago