ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ ಎಂದು ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.
ಗೋಲಿಬಾರ್ ಘಟನೆ ಸಂಬಂಧ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಶುಕ್ರವಾರ ಈ ಮಾಹಿತಿ ನೀಡಿದೆ.
ಗೋಲಿಬಾರ್ ಘಟನೆ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖೆ ಮುಗಿದಿದೆ. ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಪೊಲೀಸರು ಸೇರಿದಂತೆ ಯಾರೊಬ್ಬರು ತಪ್ಪಿತಸ್ಥರಲ್ಲ ಎಂದು ಮ್ಯಾಜಿಸ್ಟ್ರೇಟ್ ತನಿಖಾ ವರದಿ ಹೇಳಿದೆ. ಆ ವರದಿಯನ್ನು ಸರ್ಕಾರ ಪೂರ್ಣ ಪ್ರಮಾಣದಲ್ಲಿ ಒಪ್ಪಿಕೊಂಡಿದೆ ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್ ಗೆ ತಿಳಿಸಿದರು.
ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ ಹೈಕೋರ್ಟ್ ವಿಚಾರಣೆ ಮುಂದೂಡಿತು.
2019ರ ಡಿಸೆಂಬರ್ 19ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಗಲಭೆ ಉಂಟಾಗಿತ್ತು. ಈ ವೇಳೆ ನಡೆದ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…