Featured

ಮಂಗಳೂರು ಗೋಲಿಬಾರ್‌ ಪ್ರಕರಣ: ಪೊಲೀಸರು ತಪ್ಪಿತಸ್ಥರಲ್ಲ : ಸರ್ಕಾರ – Vishwanews24

ಮಂಗಳೂರು ಗೋಲಿಬಾರ್‌ ಪ್ರಕರಣ: ಪೊಲೀಸರು ತಪ್ಪಿತಸ್ಥರಲ್ಲ : ಸರ್ಕಾರ – Vishwanews24

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್‌ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ ಎಂದು ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.

ಗೋಲಿಬಾರ್ ಘಟನೆ ಸಂಬಂಧ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಶುಕ್ರವಾರ ಈ ಮಾಹಿತಿ ನೀಡಿದೆ.

ಗೋಲಿಬಾರ್ ಘಟನೆ ಸಂಬಂಧ ‌ಮ್ಯಾಜಿಸ್ಟ್ರೇಟ್ ತನಿಖೆ ಮುಗಿದಿದೆ. ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಪೊಲೀಸರು ಸೇರಿದಂತೆ ಯಾರೊಬ್ಬರು ತಪ್ಪಿತಸ್ಥರಲ್ಲ ಎಂದು ಮ್ಯಾಜಿಸ್ಟ್ರೇಟ್ ತನಿಖಾ ವರದಿ ಹೇಳಿದೆ. ಆ ವರದಿಯನ್ನು ಸರ್ಕಾರ ಪೂರ್ಣ ಪ್ರಮಾಣದಲ್ಲಿ ಒಪ್ಪಿಕೊಂಡಿದೆ ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್ ಗೆ ತಿಳಿಸಿದರು.

ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ ಹೈಕೋರ್ಟ್ ವಿಚಾರಣೆ ಮುಂದೂಡಿತು.

2019ರ ಡಿಸೆಂಬರ್ 19ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಗಲಭೆ ಉಂಟಾಗಿತ್ತು. ಈ ವೇಳೆ ನಡೆದ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟಿದ್ದರು.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

46 minutes ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

1 hour ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

1 hour ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

2 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

3 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

4 hours ago