ಕೋಲ್ಕತ್ತಾ: ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಗೋಲಿಬಾರ್’ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರುಪಾಯಿ ನೀಡುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಸಿಎಂ ಯಡಿಯೂರಪ್ಪ ಗೋಲಿಬಾರ್’ನಲ್ಲಿ ಮೃತಪಟ್ಟವರ ಕುಟುಂಬದ ಪರಿಹಾರ ಘೋಷಣೆ ಹಿಂಪಡೆದ ಬೆನ್ನಲ್ಲೇ, ಮಮತಾ ಬ್ಯಾನರ್ಜಿ ಈ ಘೋಷನೆ ಮಾಡಿದ್ದಾರೆ.
ಸಿಎಎ ಮತ್ತು ಎನ್ ಆರ್ ಸಿ ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ಸ್ವತಃ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ಪ್ರತಿಭಟನೆಗಿಳಿದಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಾತ್ರವಲ್ಲ, ಪ್ರತಿಭಟನೆಯನ್ನು ವಿದ್ಯಾರ್ಥಿಗಳು ಮುಂದುವರೆಸಬೇಕು ಎಂದು ಮನವಿ ಮಾಡಿದರು. ನಿಮ್ಮ ಪ್ರಜಾಪ್ರಭುತ್ವದ ಹಕ್ಕಿಗಾಗಿ ಪ್ರಜಾಪ್ರಭುತ್ವದ ರೀತಿಯಲ್ಲಿ ಪ್ರತಿಭಟನೆ ಮುಂದುವರೆಸಬೇಕು ಎಂದು ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಹಿಂಸಾಚಾರದ ವೇಳೆ ಪೊಲೀಸರ ಗುಂಡೇಟಿನಿಂದ ಮೃತಪಟ್ಟಿದ್ದ ಇಬ್ಬರ ಕುಟುಂಬಕ್ಕೆ ತಲಾ 5 ಲಕ್ಷ ರುಪಾಯಿ ಚೆಕ್ ನೀಡಲಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…