ಮಂಗಳೂರು : ನಗರದಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೃತಪಟ್ಟ ನೌಶೀರ್ ಹಾಗೂ ಜಲೀಲ್ ಕುಟುಂಬಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇರಿ 7.5 ಲಕ್ಷ ಪರಿಹಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿತರಿಸಿದರು.
ಮಂಗಳೂರಿನಲ್ಲಿ ಕಳೆದ ಬುಧುವಾರದಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ, ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಇಂತಹ ಪ್ರತಿಭಟನೆಯ ವೇಳೆ ಪೊಲೀಸರು ನಡಿಸಿದ ಗೋಲಿಬಾರ್ ಗೆ ನಗರದ ಜಲೀಲ್ ಹಾಗೂ ನೌಶೀರ್ ಎಂಬುವರು ಬಲಿಯಾಗಿದ್ದರು. ಮೃತರ ಮನೆಗಳಿಗೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಈ ಬಳಿಕ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಅಮಾಯಕರನ್ನು ಆಡಳಿತ ಪಕ್ಷ ಗೋಲಿಬಾರ್ ನಲ್ಲಿ ಬಲಿ ಪಡೆದಿದೆ. ಈ ಕುರಿತಂತೆ ಸಮಗ್ರ ತನಿಖೆಯಾಗಬೇಕು. ಸಿಐಡಿ ತನಿಖೆಗೆ ವಹಿಸಿರುವುದನ್ನು ನಾನು ಒಪ್ಪುವುದಿಲ್ಲ. ಸಿಐಟಿ ತನಿಖಾ ಸಂಸ್ಥೆ ಸರ್ಕಾರದ ಕೈಗೊಂಬೆಯಾಗಿದೆ. ಇದರ ಜೊತೆಗೆ ನ್ಯಾಯಾಂಗ ತನಿಖೆ ಕೂಡ ನಡೆಸಬೇಕು. ಈ ಮೂಲಕ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಬೇಕು ಎಂಬುದಾಗಿ ಅಗ್ರಹಿಸಿದರು.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…