ಮಂಗಳೂರು : ನಗರದಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೃತಪಟ್ಟ ನೌಶೀರ್ ಹಾಗೂ ಜಲೀಲ್ ಕುಟುಂಬಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇರಿ 7.5 ಲಕ್ಷ ಪರಿಹಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿತರಿಸಿದರು.
ಮಂಗಳೂರಿನಲ್ಲಿ ಕಳೆದ ಬುಧುವಾರದಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ, ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಇಂತಹ ಪ್ರತಿಭಟನೆಯ ವೇಳೆ ಪೊಲೀಸರು ನಡಿಸಿದ ಗೋಲಿಬಾರ್ ಗೆ ನಗರದ ಜಲೀಲ್ ಹಾಗೂ ನೌಶೀರ್ ಎಂಬುವರು ಬಲಿಯಾಗಿದ್ದರು. ಮೃತರ ಮನೆಗಳಿಗೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಈ ಬಳಿಕ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಅಮಾಯಕರನ್ನು ಆಡಳಿತ ಪಕ್ಷ ಗೋಲಿಬಾರ್ ನಲ್ಲಿ ಬಲಿ ಪಡೆದಿದೆ. ಈ ಕುರಿತಂತೆ ಸಮಗ್ರ ತನಿಖೆಯಾಗಬೇಕು. ಸಿಐಡಿ ತನಿಖೆಗೆ ವಹಿಸಿರುವುದನ್ನು ನಾನು ಒಪ್ಪುವುದಿಲ್ಲ. ಸಿಐಟಿ ತನಿಖಾ ಸಂಸ್ಥೆ ಸರ್ಕಾರದ ಕೈಗೊಂಬೆಯಾಗಿದೆ. ಇದರ ಜೊತೆಗೆ ನ್ಯಾಯಾಂಗ ತನಿಖೆ ಕೂಡ ನಡೆಸಬೇಕು. ಈ ಮೂಲಕ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಬೇಕು ಎಂಬುದಾಗಿ ಅಗ್ರಹಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…