ಮಂಗಳೂರು: ಗೋವು ಅಕ್ರಮ ವಧೆ ಪ್ರಕರಣವೊಂದರಲ್ಲಿ ಆರೋಪಿಯ ಜಮೀನನ್ನು ಮುಟ್ಟುಗೋಲು ಹಾಕುವಂತೆ ಸಹಾಯಕ ಆಯುಕ್ತ ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮದನಮೋಹನ್ ಸಿ. ಆದೇಶ ಹೊರಡಿಸಿದ್ದಾರೆ.
ಗೋವನ್ನು ಅಕ್ರಮವಾಗಿ ವಧೆ ಮಾಡಲಾಗಿರುವ ಬಗ್ಗೆ ವಧೆ ಮಾಡಲಾದ ಸ್ಥಳದ ಮಾಲಕ ಯಾಕೂಬ್ ಎಂಬಾತನ ಹೆಸರಿನಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಅಧಿನಿಯಮ 2020ರ ಕಲಂ 8(4) ಹಾಗೂ 8(5)ದಂತೆ ಪ್ರಕರಣ ದಾಖಲಾಗಿತ್ತು. ಕಂಕನಾಡಿ ನಗರ ಠಾಣಾ ಉಪನಿರೀಕ್ಷಕರು ದೂರು ದಾಖಲಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಕೂಬ್ ಹೆಸರಿನಲ್ಲಿ ಅಡ್ಕೂರು ಗ್ರಾಮದ ಅದ್ಯಪಾಡಿಯಲ್ಲಿ ಡೋರ್ ನಂ.1-337 (ಸ.ನಂ.33/6)ರ 15 ಸೆಂಟ್ಸ್ ಜಮೀನನ್ನು ಸರ್ಕಾರದ ವಶಕ್ಕೆ ಪಡೆದು ಮುಟ್ಟುಗೋಲು ಹಾಕುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಇದರೊಂದಿಗೆ ಪ್ರಕರಣದಲ್ಲಿ ವಶಪಡಿಸಿಕೊಳ್ಳಲಾದ ವಾಹನ ಹಾಗು ಇತರ ಸೊತ್ತುಗಳನ್ನು ಸಕ್ಷಮ ಪ್ರಾಧಿಕಾರದಿಂದ ಮೌಲ್ಯಮಾಪನ ಮಾಡಿಸಬೇಕು. ಬಳಿಕ ಅದರ ಅಂದಾಜು ಮೌಲ್ಯವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ದೂರುದಾರರಿಗೆ ನಿರ್ದೇಶನ ನೀಡಲಾಗಿದೆ.
ಈಗಾಗಲೇ 3ನೇ ಸಿಜೆಎಂ ನ್ಯಾಯಾಲಯದಲ್ಲಿ ಪ್ರಕರಣ ಸಂಬಂಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದು, ಅದು ಮುಕ್ತಾಯಗೊಂಡ ಬಳಿಕ ಅಂತಿಮ ವರದಿಯನ್ನು ಎಸಿ ಕೋರ್ಟ್‌ಗೆ ಸಲ್ಲಿಸಬೇಕು. ಅಂತಿಮ ಆದೇಶ ಪ್ರತಿ ಕೂಡಾ ಜೊತೆಗಿರಬೇಕು ಎಂದು ಸೂಚಿಸಲಾಗಿದೆ.
ಬಂಟ್ವಾಳ: ಶಾಲೆಗೆಂದು ಹೋಗಿದ್ದ ಬಾಲಕಿ ನಾಪತ್ತೆ, ದೂರು ದಾಖಲು – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…