Featured

ಮಂಗಳೂರು: ಅಕ್ರಮ ಗೋವು ವಧೆ ಪ್ರಕರಣ ; ಆರೋಪಿ ಆಸ್ತಿ ಮುಟ್ಟಗೋಲಿಗೆ ಅದೇಶ – Vishwanews24

ಮಂಗಳೂರು: ಅಕ್ರಮ ಗೋವು ವಧೆ ಪ್ರಕರಣ ; ಆರೋಪಿ ಆಸ್ತಿ ಮುಟ್ಟಗೋಲಿಗೆ ಅದೇಶ

ಮಂಗಳೂರು: ಗೋವು ಅಕ್ರಮ ವಧೆ ಪ್ರಕರಣವೊಂದರಲ್ಲಿ ಆರೋಪಿಯ ಜಮೀನನ್ನು ಮುಟ್ಟುಗೋಲು ಹಾಕುವಂತೆ ಸಹಾಯಕ ಆಯುಕ್ತ ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮದನಮೋಹನ್‌ ಸಿ. ಆದೇಶ ಹೊರಡಿಸಿದ್ದಾರೆ.

ಗೋವನ್ನು ಅಕ್ರಮವಾಗಿ ವಧೆ ಮಾಡಲಾಗಿರುವ ಬಗ್ಗೆ ವಧೆ ಮಾಡಲಾದ ಸ್ಥಳದ ಮಾಲಕ ಯಾಕೂಬ್ ಎಂಬಾತನ ಹೆಸರಿನಲ್ಲಿ ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಅಧಿನಿಯಮ 2020ರ ಕಲಂ 8(4) ಹಾಗೂ 8(5)ದಂತೆ ಪ್ರಕರಣ ದಾಖಲಾಗಿತ್ತು. ಕಂಕನಾಡಿ ನಗರ ಠಾಣಾ ಉಪನಿರೀಕ್ಷಕರು ದೂರು ದಾಖಲಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಕೂಬ್‌ ಹೆಸರಿನಲ್ಲಿ ಅಡ್ಕೂರು ಗ್ರಾಮದ ಅದ್ಯಪಾಡಿಯಲ್ಲಿ ಡೋರ್‌ ನಂ.1-337 (ಸ.ನಂ.33/6)ರ 15 ಸೆಂಟ್ಸ್‌ ಜಮೀನನ್ನು ಸರ್ಕಾರದ ವಶಕ್ಕೆ ಪಡೆದು ಮುಟ್ಟುಗೋಲು ಹಾಕುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ರಾ.ಹೆ ಸೂಚನ ಫಲಕಗಳಿಗೆ  ಸರಳ-ಸಜ್ಜನ ಕಾಪು ಶಾಸಕರ ಫ್ಲೆಕ್ಸ್ : ಸೋಶಿಯಲ್ ಮೀಡಿಯಾದಲ್ಲಿ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ:vishwanes24 –

ಇದರೊಂದಿಗೆ ಪ್ರಕರಣದಲ್ಲಿ ವಶಪಡಿಸಿಕೊಳ್ಳಲಾದ ವಾಹನ ಹಾಗು ಇತರ ಸೊತ್ತುಗಳನ್ನು ಸಕ್ಷಮ ಪ್ರಾಧಿಕಾರದಿಂದ ಮೌಲ್ಯಮಾಪನ ಮಾಡಿಸಬೇಕು. ಬಳಿಕ ಅದರ ಅಂದಾಜು ಮೌಲ್ಯವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ದೂರುದಾರರಿಗೆ ನಿರ್ದೇಶನ ನೀಡಲಾಗಿದೆ.

ಈಗಾಗಲೇ 3ನೇ ಸಿಜೆಎಂ ನ್ಯಾಯಾಲಯದಲ್ಲಿ ಪ್ರಕರಣ ಸಂಬಂಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದು, ಅದು ಮುಕ್ತಾಯಗೊಂಡ ಬಳಿಕ ಅಂತಿಮ ವರದಿಯನ್ನು ಎಸಿ ಕೋರ್ಟ್‌ಗೆ ಸಲ್ಲಿಸಬೇಕು. ಅಂತಿಮ ಆದೇಶ ಪ್ರತಿ ಕೂಡಾ ಜೊತೆಗಿರಬೇಕು ಎಂದು ಸೂಚಿಸಲಾಗಿದೆ.

ಬಂಟ್ವಾಳ: ಶಾಲೆಗೆಂದು ಹೋಗಿದ್ದ ಬಾಲಕಿ ನಾಪತ್ತೆ, ದೂರು ದಾಖಲು – Vishwanews24

 

Vishwa News 24

Recent Posts

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ – vishwanews24

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…

4 hours ago

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ – vishwanews24

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…

4 hours ago

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ – vishwanews24

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…

5 hours ago

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…

5 hours ago

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ -vishwanews24

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…

5 hours ago

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ -vishwanews24

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…

5 hours ago