Featured

ಮಂಗಳೂರು: ಗೋಶಾಲೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ : ಡಾ. ರಾಜೇಂದ್ರ ಕೆ.ವಿ – Vishwanews24

ಮಂಗಳೂರು: ಗೋಶಾಲೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ : ಡಾ. ರಾಜೇಂದ್ರ ಕೆ.ವಿ – Vishwanews24

ಮಂಗಳೂರು: ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಸರ್ಕಾರದ ವತಿಯಿಂದ ಗೋಶಾಲೆ ನಿರ್ಮಿಸಲು 98.45 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, 36 ಲಕ್ಷ ರೂ.ಗಳ ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು.

ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಡುಗಡೆಯಾದ ಅನುದಾನದಲ್ಲಿ ಮೊದಲ ಹಂತವಾಗಿ ಸುಮಾರು 10 ಎಕರೆ ಪ್ರದೇಶದಲ್ಲಿ ಬೇಲಿ ನಿರ್ಮಿಸಿ, ಕೊಳವೆಬಾವಿ ಕೊರೆಯಿಸಿ ಅಗತ್ಯವಿರುವ ಮೇವು ಬೆಳೆಯಲಾಗುವುದು, ಮುಂದಿನ ಹಂತದಲ್ಲಿ ಕೊಟ್ಟಿಗೆಗಳನ್ನು ನಿರ್ಮಿಸಲಾಗುವುದು ಎಂದ ಜಿಲ್ಲಾಧಿಕಾರಿಯವರು, ಜಿಲ್ಲಾ ಗೋಶಾಲೆ ಮೇಲಿನ ಅವಲಂಬನೆ ಕಡಿಮೆ ಮಾಡುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಗೋಶಾಲೆಗಳನ್ನು ನಿರ್ಮಿಸಲು ಕ್ರಮಕೈಗೊಳ್ಳಲಾಗುವುದು, ಆ ಉದ್ದೇಶಕ್ಕಾಗಿ ದಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳನ್ನು ಗುರುತಿಸಲಾದ್ದು, ಅಲ್ಲಿ ಗೋಶಾಲೆ ತೆರೆಯಲು ಯೋಜನೆ ರೂಪಿಸಲಾಗುತ್ತಿದೆ, ಇದರಿಂದ ಗೋಶಾಲೆಗಳ ನಿರ್ವಹಣೆ ಸುಲಭವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ :

ಮೊದಲ ಹಂತದಲ್ಲಿ ಕಡಬ ತಾಲೂಕಿನಲ್ಲಿ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಮಂಗಳೂರು ತಾಲೂಕಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಬಂಟ್ವಾಳ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನ, ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿನ ಸೌತಡ್ಕ ಮಹಾಗಣಪತಿ ದೇವಸ್ಥಾನಗಳನ್ನು ಗುರುತಿಸಲಾಗಿದೆ, ಈ ದೇವಸ್ಥಾನಗಳಿಗೆ ಅವಶ್ಯವಿರುವ ಜಾಗವನ್ನು ಗೋಶಾಲೆಯ ಉದ್ದೇಶಕ್ಕಾಗಿ ಜಿಲ್ಲಾಡಳಿತದಿಂದ ಮೀಸಲಿಡಲಾಗುವುದು ಎಂದು ಅವರು ತಿಳಿಸಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಪರಿಸರ ಸ್ನೇಹಿ ಗೋಶಾಲೆ ತೆರೆಯಲು ರೂಪುರೇಷೆಗಳನ್ನು ಸಿದ್ದಪಡಿಸಲಾಗುತ್ತಿದೆ. ಇದಕ್ಕಾಗಿ ದೇವಸ್ಥಾನದ ಸಮೀಪವಿರುವ ಡೀಮ್ಡ್ ಅರಣ್ಯವನ್ನು ಆಯ್ಕೆ ಮಾಡಲಾಗಿದ್ದು, ಈ ಜಾಗದಲ್ಲಿ ಮರಗಳನ್ನು ಕತ್ತರಿಸದೇ ಅಲ್ಲಿರುವ ಮರಗಳನ್ನು ಬಳಸಿಕೊಂಡು, ಮರಗಳ ನಡುವೆ ನವೀನ ಮಾದರಿಯಲ್ಲಿ ಗೋಶಾಲೆ ನಿರ್ಮಾಣ ಮಾಡಲಾಗುವುದೆಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ದಿ ಪಡಿಸಲು ಚಿಂತಿಸಲಾಗಿದ್ದು, ದೇವಸ್ಥಾನದ ಬಳಿಯಲ್ಲಿಯೇ ಗೋಶಾಲೆ ನಿರ್ಮಾಣ ಮಾಡುವುದರಿಂದ ನಿರ್ವಹಣೆಗೆ ಅವಶ್ಯವಿರುವ ಸಂಪನ್ಮೂಲವನ್ನು ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಂದ ಸಂಗ್ರಹಿಸುವುದು ಸುಲಭವಾಗುವುದು, ಇದರಿಂದ ನಿರ್ವಹಣೆಯೂ ಸುಲಭವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ :

ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಪ್ರಸನ್ನ ಕುಮಾರ್ ಟಿ.ಜಿ, ಪಾಲಿಕ್ಲಿನಿಕ್‍ನ ಉಪನಿರ್ದೇಶಕ ಡಾ. ರಾಮಪ್ರಕಾಶ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರಿನಾರಾಯಣ ಅಸ್ತ್ರಣ್ಣ, ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯರು, ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯರಾದ ದಿನೇಶ್ ಪೈ ಹಾಜರಿದ್ದರು.

 

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

9 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

15 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

16 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

16 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

18 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

18 hours ago