Featured

ಮಂಗಳೂರು: ಗೋಹಂತಕರ ಆಸ್ತಿ ಮುಟ್ಟುಗೋಲಿಗೆ ಅಧಿಕಾರಿಗಳಿಗೆ  ಶಾಸಕ ಕಾಮತ್ ಖಡಕ್ ಸೂಚನೆ ; ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶ – Vishwanews24

ಮಂಗಳೂರು: ಗೋಹಂತಕರ ಆಸ್ತಿ ಮುಟ್ಟುಗೋಲಿಗೆ ಅಧಿಕಾರಿಗಳಿಗೆ  ಶಾಸಕ ಕಾಮತ್ ಖಡಕ್ ಸೂಚನೆ ; ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶ

ಮಂಗಳೂರು: ನಗರದ ಬಜಾಲ್ ಪರಿಸರದಲ್ಲಿ ಗೋಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಗೋಕಳ್ಳರ ಬಂಧನಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಕ್ರಮವಾಗಿ ಗೋಹತ್ಯೆ, ಗೋಕಳ್ಳತನ ಪ್ರಕರಣಗಳನ್ನು ತಡೆಯಲು ಗೋಕಳ್ಳರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸೂಚನೆ ನೀಡಿರುವ ಶಾಸಕ ಕಾಮತ್ ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಬಜಾಲ್ ಕಾನಕರಿಯ ನಿವಾಸಿ ಅಶ್ವಿನ್ ಎಂಬವರ ಮನೆಯ ಹಟ್ಟಿಯಿಂದ ಗೋಕಳ್ಳತನವಾಗಿದ್ದು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದು ಶಾಸಕ ಕಾಮತ್ ಸೂಚನೆಯಿಂದ ತನಿಖೆಗೆ ಮತ್ತಷ್ಟು ಚುರುಕು ದೊರೆತಿದೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಶಾಸಕ ವೇದವ್ಯಾಸ್ ಕಾಮತ್, ಹಿಂದೂ ಧರ್ಮದಲ್ಲಿ ಗೋವಿಗೆ ಮಹತ್ತರವಾದ ಸ್ಥಾನವಿದೆ. ಗೋವಿನಿಂದಲೇ ಬದುಕು ಸಾಗಿಸುವ ಅನೇಕ ಕುಟುಂಬಗಳಿವೆ. ಆ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರಕಾರವು ಗೋಹತ್ಯೆ ಪ್ರತಿಬಂಧಕವನ್ನು ಜಾರಿಗೊಳಿಸಿದ್ದು ಗೋಕಳ್ಳರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಗೋಕಳ್ಳತನ, ಗೋಹತ್ಯೆಯ ಅಪರಾಧ ರುಜುವಾತಾದರೆ ಆಸ್ತಿಮುಟ್ಟುಗೋಲು ಹಾಕಲು ಸೂಚನೆ ನೀಡಿದ್ದು ಇದು ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶವಾಗಿದೆ. ಮುಂದೆಯೂ ಇಂತಹ ಕೃತ್ಯಗಳಲ್ಲಿ ಭಾಗಿಯಾದರೆ ಮತ್ತಷ್ಟು ಕಠಿಣ ಶಿಕ್ಷೆ ಅನುಭವಿಸಲು ಸಿದ್ಧರಿರಬೇಕೆಂದು ಗೋಕಳ್ಳರಿಗೆ ಎಚ್ಚರಿಕೆ ನೀಡಿದ್ದಾರೆ

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

24 minutes ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

37 minutes ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

42 minutes ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

1 hour ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago