ಮಂಗಳೂರು: ತೋಟ ಬೆಂಗರೆಯಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ನಾಗರೀಕರ ವತಿಯಿಂದ ಒಂದು ಲಕ್ಷ ರೂಪಾಯಿ ಮೊತ್ತವನ್ನು ಬಹುಮಾನವಾಗಿ ನೀಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಗ್ಯಾಂಗ್ ರೇಪ್ ಪ್ರಕರಣದಲ್ಲಿ ಯಾವುದೇ ದೂರು ಬಾರದಿದ್ದರೂ, ಪ್ರಕರಣದ ಮಾಹಿತಿ ದೊರೆತ ತಕ್ಷಣವೇ ಪೊಲೀಸರು ಸ್ವಯಂಪ್ರೇರಿತ ವಾಗಿ ಪ್ರಕರಣ ದಾಖಲಿಸಿದ್ದಾರೆ.
ಅಲ್ಲದೆ, ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿರುವುದು ಸರ್ವತ್ರ ಪ್ರಶಂಸನೆಗೆ ಪಾತ್ರವಾಗಿದೆ. ಇದಕ್ಕಾಗಿ ಪೊಲೀಸರನ್ನು ಅಭಿನಂಧಿಸುವುದಾಗಿ ಸಚಿವರು ತಿಳಿಸಿದ್ದಾರೆ.
ಸಂತ್ರಸ್ತ ಯುವತಿಗೆ ರಾಜ್ಯ ಸರಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು. ಬೆಂಗರೆ ಪ್ರದೇಶದಲ್ಲಿ ಪೊಲೀಸ್ ಔಟ್ ಪೋಸ್ಟ್ ತೆರೆಯಲು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಇಂತಹ ಅತ್ಯಾಚಾರ ಪ್ರಕರಣಗಳ ಆರೋಪಿಗಳ ಪರ ಯಾವುದೇ ನ್ಯಾಯವಾದಿಗಳು ವಾದಿಸಲು ಮುಂದೆ ಬಾರದೆ, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲು ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…